ಬೆಂಗಳೂರು : ಕರ್ನಾಟಕದಲ್ಲಿ ಕೆಲವು ನಿರ್ದಿಷ್ಟ ಮುಜರಾಯಿ ದೇವಸ್ಥಾನಗಳ ಸೇವಾ ಶುಲ್ಕ ಸದ್ದಿಲ್ಲದೇ ಏರಿಕೆಯಾಗಿದೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರ ದೇವಾಲಯಗಳಿದ್ದು, ಈ ದೇವಾಲಯಗಳ ಪೈಕಿ 9 ದೇವಸ್ಥಾನಗಳ ಸೇವಾಶುಲ್ಕ ಏರಿಕೆ ಮಾಡಲಾಗಿದೆ.

ಅಕ್ಟೋಬರ್ 1ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಕುಕ್ಕೆ ಸುಬ್ರಹ್ಮಣ್ಯ, ಪುತ್ತೂರು ಮಹಾಲಿಂಗೇಶ್ವರ ಮತ್ತು ಮಲ್ಲೇಶ್ವರದ ಯೋಗ ನರಸಿಂಹಸ್ವಾಮಿ ದೇವಾಲಯಗಳು ಈ ಬದಲಾವಣೆಗೆ ಒಳಗಾಗಿವೆ. ಈ ಏರಿಕೆಯು ದೇವಾಲಯಗಳ ಆಡಳಿತ ಮಂಡಳಿಗಳ ನಿರ್ಧಾರವಾಗಿದ್ದು, 5-10% ದಷ್ಟು ಶುಲ್ಕ ಹೆಚ್ಚಳ ಮಾಡಲಾಗಿದೆ.ಕಳೆದ 4-5 ವರ್ಷದಿಂದ ಸೇವಾಶುಲ್ಕ ಪರಿಷ್ಕರಣೆ ಮಾಡದ, ಯಾವ ದೇವಾಲಯಗಳು ಸೇವಾಶುಲ್ಕ ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದವೋ ಆ ದೇವಾಲಯಗಳ ಸೇವಾಶುಲ್ಕವನ್ನ ಆಗಮ ಪಂಡಿತರ ಪರಿಶೀಲನೆ ನಂತರ 5-10% ವರೆಗೂ ಮುಜರಾಯಿ ಇಲಾಖೆ ಆಯುಕ್ತರು ಏರಿಕೆ ಮಾಡಿದ್ದಾರೆ. ಇದು ದೇವಾಲಯಗಳ ಆಡಳಿತ ಮಂಡಳಿ ತೀರ್ಮಾನವೇ ಹೊರತು ಸರ್ಕಾರದ ನಿರ್ಧಾರವಲ್ಲವೆಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಯಾವ್ಯಾವ ದೇವಸ್ಥಾನಗಳಲ್ಲಿ ಶುಲ್ಕ ಏರಿಕೆ?
ದಕ್ಷಿಣ ಕನ್ನಡ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ,ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ,ಸೌತಡ್ಕ ಮಹಾಗಣಪತಿ ದೇವಸ್ಥಾನ,ಸೂರ್ಯನಾರಾಯಣ ದೇವಸ್ಥಾನ ಮರೋಳಿ.
ಬೆಂಗಳೂರು ನಗರ : ಯೋಗ ನರಸಿಂಹಸ್ವಾಮಿ ದೇವಸ್ಥಾನ, ಮಲ್ಲೇಶ್ವರಂ,ನಂದಿ ತೀರ್ಥ ದೇವಸ್ಥಾನ, ಮಲ್ಲೇಶ್ವರಂ, ಮಹಾಗಣಪತಿ ದೇವಸ್ಥಾನ,ಮಲ್ಲೇಶ್ವರಂ
ಚಿಕ್ಕಬಳ್ಳಾಪುರ : ವಿಧುರಾಶ್ವಥ ನಾರಾಯಣ ಸ್ವಾಮಿ ದೇವಸ್ಥಾನ, ವೆಂಕಟರಮಣ ದೇವಸ್ಥಾನ, ತಲಕಾಯ ಬೆಟ್ಟ

