ಮಂಗಳೂರು : ಸೌಜನ್ಯ ಪರ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದ.ಕ ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ದಕ್ಷಿಣ ಕನ್ನಡದ ವಿವಿಧ ಠಾಣೆಗಳಲ್ಲಿ ಸುಮಾರು 32 ಪ್ರಕರಣಗಳು ದಾಖಲಾಗಿದ್ದವು.ಒಂದು ವರ್ಷ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.ಈ ಅವಧಿಯಲ್ಲಿ ಅವರು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

