ಮಲ್ಪೆ : ಉಡುಪಿಯ ಎಕೆಎಂಎಸ್ ಬಸ್ ಮಾಲೀಕ ರೌಡಿಶೀಟರ್ ಸೈಫುದ್ದೀನ್ನನ್ನು ಮಲ್ಪೆ ಸಮೀಪದ ಕೊಡವೂರಿನ ಮನೆಯಲ್ಲಿ ಪಿಸ್ತೂಲ್ ನಿಂದ ಗುಂಡಿಕ್ಕಿ ನಂತರ ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ
ಮಲ್ಪೆಯ ಕೊಡವೂರಿನ ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಕೊಲೆಗೈಯ್ಯಲಾಗಿದೆ. ಸೈಫುದ್ದೀನ್ನ ಸಹಚರನೇ ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.
ಸೈಪ್ಪುದ್ದೀನ್ ಹಣದ ವ್ಯವಹಾರ ಹಾಗೂ ಬಸ್ ವ್ಯವಹಾರಕ್ಕೆ ಸಂಬಂಧಿಸಿ ಹಲವರೊಂದಿಗೆ ದ್ವೇಷ ಕಟ್ಟಿಕೊಂಡಿದ್ದ , ಅಲ್ಲದೆ 2020 ರಲ್ಲಿ ಇತನ ಮೇಲೆ ಕೊಲೆ ಯತ್ನ ಕೂಡಾ ನಡೆದಿತ್ತು.ಮುಂಬೈ ಬಾರ್ ಮಾಲಿಕ ವಶಿಷ್ಠ ಯಾದವ್ ಕೊಲೆ ಪ್ರಕರಣದಲ್ಲಿ ಈತ ಭಾಗಿಯಾಗಿದ್ದು ಪ್ರಕರಣದಲ್ಲಿ ಬಂಧಿತನಾಗಿ ನಂತರ ಜಮೀನಿನ ಮೇಲೆ ಬಿಡುಗಡೆಗೊಂಡಿದ್ದ.

