ಬೆಂಗಳೂರು : ರಂಗಭೂಮಿ ನಟ,ನಿರ್ದೇಶಕ ಯಶವಂತ್ ಸರದೇಶಪಾಂಡೆ (62) ನಿಧನ ಹೊಂದಿದ್ದಾರೆ.ನಿನ್ನೆ ರಾತ್ರಿ ಧಾರವಾಡದಲ್ಲಿ ನಾಟಕ ಪ್ರದರ್ಶನ ನೀಡಿದ್ದ ಅವರು, ಸೋಮವಾರ ಬೆಳಿಗ್ಗೆ ಬೆಂಗಳೂರು ತಲುಪಿದ್ದರು.ಬೆಳಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು.ನಂತರ ಅವರನ್ನು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಯಶವಂತ ಸರದೇಶಪಾಂಡೆ ರಂಗಭೂಮಿ ಕಲಾವಿದರಾಗಿ ಹೆಚ್ಚು ಜನಪ್ರಿಯರಾಗಿದ್ದರು. ಅವರು ನಟಿಸಿ-ನಿರ್ದೇಶಿಸಿರುವ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತ್ತು.ಅವರು ಕಿರುತೆರೆ ಧಾರಾವಾಹಿಗಳಲ್ಲಿ ನಟನೆಯ ಜತೆಗೆ, ಸಂಭಾಷಣೆಕಾರರಾಗಿಯೂ ಅವರ ಕೆಲಸ ಮಾಡಿದ್ದಾರೆ. ಮತ್ತು ಕನ್ನಡ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕಮಲ್ ಹಾಸನ್ ಅಭಿನಯದ ‘ರಾಮ ಶ್ಯಾಮ ಭಾಮಾ’ ನಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು.ಇವರ ಪತ್ನಿ ಮಾಲತಿ ಸಹ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಜನಪ್ರಿಯ ಕಲಾವಿದೆಯಾಗಿದ್ದಾರೆ.
ಹಾಸ್ಯ ನಾಟಕಗಳ ಮುಖಾಂತರ ಕರ್ನಾಟಕದಾದ್ಯಂತ ಮನೆಮಾತಾಗಿರುವ ಯಶವಂತ ಸರದೇಶಪಾಂಡೆಯವರು 1965ರ ಜೂ.13ರಲ್ಲಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಎಂಬ ಹಳ್ಳಿಯಲ್ಲಿ ಜನಿಸಿದರು.ತಂದೆ ಶ್ರೀಧರರಾವ್ ಗೋಪಾಲರಾವ್ ಸರದೇಶಪಾಂಡೆ, ತಾಯಿ ಕಲ್ಪನಾದೇವಿ.

