ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ವಿಶೇಷ ತನಿಖಾ ತಂಡ ಎಸ್ಐಟಿ ಮತ್ತಷ್ಟು ಚುರುಕುಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಗಳನ್ನು ತಯಾರಿಸಿದ ಹಲವಾರು ಯೂಟ್ಯೂಬರ್ಗಳಿಗೆ ಎಸ್ಐಟಿ ಅಧಿಕಾರಿಗಳು ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಧೂತ ಯೂಟ್ಯೂಬ್ ಚಾನೆಲ್ನಲ್ಲಿ ಕೋಮು ಸೂಕ್ಷ್ಮ ವೀಡಿಯೊವನ್ನು ಪೋಸ್ಟ್ ಮಾಡಿದ ಆರೋಪ ಹೊತ್ತಿರುವ ಎಂ.ಡಿ. ಸಮೀರ್, ನಿರೀಕ್ಷಣಾ ಜಾಮೀನು ಪಡೆದು ಹೊರಬಂದಿದ್ದು. ಮತ್ತೆ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಬೇಕಾಗಿದೆ.ಸಮೀರ್ ಎಂಡಿ ಸೇರಿದಂತೆ ಐದಕ್ಕೂ ಹೆಚ್ಚು ಯೂಟ್ಯೂಬರ್ಗಳಿಗೆ ನೋಟಿಸ್ ಹೋಗಿದ್ದು, ಅವರೆಲ್ಲಾ ಬೆಳ್ತಂಗಡಿ ಎಸ್ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಎಸ್ಐಟಿ ಅಧಿಕಾರಿಗಳು ಈ ವಿಚಾರಣೆಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು,ಈ ಬಾರಿ ಯಾವೆಲ್ಲಾ ಪ್ರಶ್ನೆಗಳನ್ನು ಕೇಳಬೇಕು ಎಂಬುದರ ಕುರಿತು ಅಧಿಕಾರಿಗಳು ಪೂರ್ವ ಸಿದ್ಧತೆ ನಡೆಸಿದ್ದಾರೆ.ಅಲ್ಲದೆ ಎಸ್ಐಟಿ ಅಧಿಕಾರಿಗಳು ಚಿನ್ನಯ್ಯ ನೀಡಿದ ಹೇಳಿಕೆಗಳಲ್ಲಿ ಕೆಲವೊಂದು ವಿಚಾರಗಳ ಬಗ್ಗೆ ಯೂಟ್ಯೂಬರ್ಗಳ ಮೂಲಕ ಮರು ಪರಿಶೀಲನೆ ನಡೆಸುವುದು ಮತ್ತು ಪ್ರಶ್ನೆಗಳನ್ನು ಕೇಳುವ ಉದ್ದೇಶದಿಂದ ಅವರನ್ನು ಕರೆಸಿಕೊಳ್ಳಲಾಗುವುದು ಎಂದು ಹೇಳಲಾಗಿದೆ.

