ಬೆಳಗಾವಿ : ಉರುಸ್ ಮೆರವಣಿಗೆಯಲ್ಲಿ’ ಐ ಲವ್ ಮೊಹಮ್ಮದ್ ‘ ಘೋಷಣೆ ಕೂಗಿ ಮಾಬುಸುಬಾನಿ ದರ್ಗಾದ ಉರುಸ್ ವೇಳೆ ಘೋಷಣೆಗೆ ಆಕ್ರೋಶ ವ್ಯಕ್ತಪಡಿಸಿದರು. ಪ್ರಶ್ನೆ ಮಾಡಿದ ಸ್ಥಳೀಯ ನಿವಾಸಿಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿದ್ದಾರೆ.
ಪ್ರತಿ ವರ್ಷ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮೂಲಕ ದರ್ಗಾಕ್ಕೆ ಹೋಗುತ್ತಿದ್ದ ಮೆರವಣಿಗೆ ಈ ವರ್ಷ ಅನುಮತಿ ಇಲ್ಲದೇ ಖಡಕ್ ಗಲ್ಲಿಗೆ ಎಂಟ್ರಿಯಾಗಿದೆ. ಈ ವೇಳೆ ಐ ಲವ್ ಮೊಹಮ್ಮದ್ ಎಂಬ ಘೋಷಣೆ ಕೂಗಿದ್ದಾರೆ.
ಯಾವಾಗಲೂ ಬಾರದ ಮೆರವಣಿಗೆ ಈಗ ಯಾಕೆ ಬಂದಿದ್ದೀರಿ ಇದು ಸ್ಥಳೀಯ ಹಿಂದೂಗಳನ್ನು ಕೆರಳಿಸಿದ್ದು ಇದಕ್ಕೆ ಆಕ್ಷೇಪಿಸಿದ್ದಾರೆ. ತಮ್ಮ ಏರಿಯಾಕ್ಕೆ ಬಂದು ಘೋಷಣೆ ಕೂಗಿದ್ದು ಯಾಕೆ ಅಂತಾ ಪ್ರಶ್ನೆ ಮಾಡಿದ ಜನರ ಮೇಲೆ ಪುಂಡಾಟ ಮೆರೆದಿದ್ದಾರೆ. ಇದಾದ ಕೆಲಹೊತ್ತಿನಲ್ಲೇ ಅನ್ಯಕೋಮಿನ ಯುವಕರು ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಲ್ವಾರ್ ಪ್ರದರ್ಶಿಸಿ ಗೂಂಡಾವರ್ತನೆ ತೋರಿದ ಆರೋಪ ಕೇಳಿಬಂದಿದೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೆರವಣಿಗೆ ವಾಪಸ್ ಕಳುಹಿಸಿದರು. ಏಕಾಏಕಿ ಮೆರವಣಿಗೆ ಬಂದವರು ಮತ್ತು ಕಲ್ಲು ತೂರಿದವರ ವಿರುದ್ಧ ಕ್ರಮಕ್ಕೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಭೇಟಿ ನೀಡಿ ಸ್ಥಳೀಯರು, ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಡಕ್ ಗಲ್ಲಿಯಲ್ಲಿ ಎರಡು ಕೋಮಿನ ಜನರ ನಡುವೆ ಘರ್ಷಣೆ ನಡೆದಿದೆ. ಒಂದು ಧಾರ್ಮಿಕ ಕಾರ್ಯಕ್ರಮ ಇತ್ತು. ಒಂದು ರೂಟ್ ಫಿಕ್ಸ್ ಇದೆ, ಅದನ್ನ ಬಿಟ್ಟು ಬೇರೆ ರೂಟ್ನಲ್ಲಿ ಬಂದಿದ್ದಾರೆ. ಇದನ್ನ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಘರ್ಷಣೆ ಆಗಿದೆ. ಸ್ಥಳೀಯರು ಕಲ್ಲು ತೂರಾಟ ಆಗಿದೆ ಅಂತಾ ಕೇಸ್ ಕೊಟ್ಟಿದ್ದಾರೆ. ಯಾರು ತಪ್ಪು ಮಾಡಿದ್ದಾರೆ ಅವರ ಮೇಲೆ ಕ್ರಮ ಆಗುತ್ತೆ.ಯಾರಿಗೂ ಗಾಯ ಆಗಿಲ್ಲ, ಎರಡು ಕೋಮಿನ ಹಿರಿಯರು ಕೂಡಲೇ ಸರಿಪಡೆಸಿದ್ದಾರೆ. ಓರಿಜನಲ್ ರೂಟ್ ಬಿಟ್ಟು ಬಂದು ತಪ್ಪಾಗಿದೆ. ‘ಐ ಲವ್ ಮುಹಮ್ಮದ್’ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿಂತೆ ಮಹಾನಗರ ಪಾಲಿಕೆ ಅವರಿಗೆ ಹೇಳುತ್ತೇವೆ. ಅನುಮತಿ ಪಡೆದು ಬ್ಯಾನರ್ ಹಾಕಲು ಸೂಚನೆ ನೀಡುತ್ತೇವೆ ಎಂದು ತಿಳಿಸಿದರು. ಘಟನೆ ಸಂಬಂಧ 11 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಸ್ಥಳದಲ್ಲಿ ಬಿಗುವಿನ ವಾತಾವರಣ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರ ಯತ್ನ ನಡೆಸಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

