ಮಂಗಳೂರು : ಟ್ರಾಫಿಕ್ ಪೊಲೀಸರೇ ಕಾರೊಂದರ ಹಿಂದಿನ ಗಾಜು ಒಡೆದು ಹಾಕಿದ ಘಟನೆ ಮಂಗಳೂರಿನ ನಂತೂರು ಸರ್ಕಲ್ ಬಳಿ ನಡೆದಿದೆ.

ಘಟನೆಯ ಬಗ್ಗೆ ಸಾರ್ವಜನಿಕರೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ . ಡ್ರಂಕ್ ಅಂಡ್ ಡ್ರೈವ್ ಅನುಮಾನದಲ್ಲಿ ಟ್ರಾಫಿಕ್ ಪೊಲೀಸ್ ಕಾರು ನಿಲ್ಲಿಸಲು ಸೂಚಿಸಿದ್ದಾರೆ.ಆದರೆ ಕಾರು ಚಾಲಕ ಕಾರು ನಿಲ್ಲಿಸದೇ ಮುಂದುವರಿದಿದ್ದಾನೆ. ಇದರಿಂದ ಕೋಪಗೊಂಡ ಪೊಲೀಸ್ ಕಾರಿನ ಹಿಂಬದಿ ಗ್ಲಾಸ್ ಒಡೆದು ಹಾಕಿದ್ದಾರೆ. ನಂತರ ಸ್ಥಳದಲ್ಲಿ ಇದ್ದ ಸಾರ್ವಜನಿಕರು ಪೊಲೀಸರನ್ನು ತರಾಟೆ ತೆಗೆದುಕೊಂಡಿದ್ದಾರೆ. ಬಳಿಕ ಚಾಲಕನ ವಿರುದ್ಧ ಡ್ರಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಿಸಲಾಗಿದೆ. ಮಂಗಳೂರು ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


