ಬೆಂಗಳೂರು : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ರೈಲ್ವೆ ಇಲಾಖೆಯು ಬೆಂಗಳೂರು ಮಂಗಳೂರು ನಡುವೆ 2 ವಿಶೇಷ ರೈಲುಗಳು ಸಂಚಾರ ನಡೆಸಲಿದೆ.
ನೈರುತ್ಯ ರೈಲ್ವೆಯು ವಿಶೇಷ ರೈಲು ಓಡಿಸಲು ನಿರ್ಧಾರಿಸಿದೆ ರೈಲು ಸಂಖ್ಯೆ 07353/07354: ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್ಪ್ರೆಸ್ 1ಟ್ರಿಪ್ ನಡೆಸಲಿದೆ
ರೈಲು ಸಂಖ್ಯೆ 07353: ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ರೈಲು ಇದೇ ಅ.17ರಂದು 4:00ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅ.18ರಂದು ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ರೈಲು ಸಂಖ್ಯೆ 07354: ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್ಪ್ರೆಸ್ ರೈಲು ಇದೇ ಅ.18ರಂದು ಮಧ್ಯಾಹ್ನ 2:35ಕ್ಕೆ ಮಂಗಳೂರು ಜಂಕ್ಷನ್ನಿಂದ ಹೊರಟು, ಅದೇ ದಿನ ರಾತ್ರಿ 11:15ಕ್ಕೆ ಯಶವಂತಪುರ ತಲುಪಲಿದೆ. ಈ ರೈಲು ಬಂಟ್ವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ ಮತ್ತು ಕುಣಿಗಲ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
- ರೈಲು ಸಂಖ್ಯೆ 06229/06230 ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ಪ್ರೆಸ್ (1 ಟ್ರಿಪ್):
ರೈಲು ಸಂಖ್ಯೆ 06229: ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ಇದೇ ಅ.19ರಂದು ರಾತ್ರಿ 12:15ಕ್ಕೆ ಯಶವಂತಪುರದಿಂದ ಹೊರಟು, ಅದೇ ದಿನ ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.
ರೈಲು ಸಂಖ್ಯೆ 06230: ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ಪ್ರೆಸ್ ರೈಲು ಇದೇ ಅ.19ರಂದು 2:35 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ಹೊರಟು, ಮರುದಿನ 12:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಇದು ಬಂಟ್ವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಕುಣಿಗಲ್ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ

