ಬೆಂಗಳೂರು,ಮಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮಳೆ ಮುಂದುವರೆದಿದೆ. ಈ ಮಧ್ಯೆ ಇನ್ನೂ ಹಲವು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳ ಬಹುತೇಕ ಕಡೆ, ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ಬದಲಾವಣೆ ಆಗಿದೆ.ಹವಾಮಾನ ಇಲಾಖೆ ಅ. 25 ಮತ್ತು 26 ರಂದು ಬೆಂಗಳೂರಿಗೆ ಎಲ್ಲೋ ಅಲರ್ಟ್ ಅ. 26 ರಂದು ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಹಾಗೂ 27ರಂದು ಆರೆಂಜ್ ಅಲರ್ಟ್ ಪ್ರಕಟಿಸಿದೆ. 27ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇದೆ. ಅಲ್ಲದೆ ಕರಾವಳಿಯ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ತಿಳಿಸಿದ್ದಾರೆ.

