ಪುತ್ತೂರು : ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 30 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ಆರ್ಎಸ್ಎಸ್ನ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಪೋಲಿಸರ ಈ ಕ್ರಮವನ್ನು ಪ್ರಶ್ನಿಸಿ ಪ್ರಭಾಕರ್ ಭಟ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು ತನ್ನ ಮೇಲೆ ದಾಖಲಾಗಿರುವ ಎಫ್ಐಆರ್ ದ್ವೇಷಪೂರಿತ ಎಂದು ವಾದಿಸಿದ್ದರು.ವಾದ ಪ್ರತಿವಾದ ಆಲಿಸಿದ ನ್ಯಾಯಾಲಯವು ಮುಂದಿನ ವಿಚಾರಣೆವರೆಗೆ ಬಂಧನ ಸಹಿತ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪುತ್ತೂರು ಆರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ಕೋರ್ಟ್ ಆದೇಶಿಸಿದೆ.ಅಲ್ಲದೆ
ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿದೆ.

ಇತ್ತೀಚಿಗೆ ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಎಂಬವರು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ದೂರು ನೀಡಿದ್ದರು. ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಹೇಳಿಕೆ ನೀಡಿದ್ದಾರೆ. ಹೀಗಾಗಿ ಪ್ರಭಾಕರ್ ಭಟ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದರು. BNS 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

