ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20ಯಲ್ಲಿ 48 ರನ್ಗಳ ಜಯದೊಂದಿಗೆ ಭಾರತ ಐದು ಪಂದ್ಯಗಳ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಈಗ ಭಾರತ ಅಂತಿಮ ಪಂದ್ಯದಲ್ಲಿ ಸೋತರೂ ಸರಣಿಯನ್ನು 2-2 ರಿಂದ ಸಮಬಲಗೊಳಿಸಬಹುದು.

ಟಾಸ್ ಗೆದ್ದ ಆಸ್ಟ್ರೇಲಿಯಾ ಭಾರತವನ್ನು ಬ್ಯಾಟಿಂಗ್ಗೆ ಇಳಿಸಿತು. ಭಾರತ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ಗಳ ನಷ್ಟಕ್ಕೆ 167 ರನ್ ಗಳಿಸಿತು.ನಂತರ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ18.2 ಓವರ್ಗಳಲ್ಲಿ 10 ವಿಕೆಟ್ಗಳ ನಷ್ಟಕ್ಕೆ 119 ರನ್ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.

ಭಾರತೀಯ ಬೌಲರ್ಗಳು ಆಸ್ಟ್ರೇಲಿಯಾದ ಇಬ್ಬರು ಬ್ಯಾಟ್ಸ್ಮನ್ಗಳನ್ನು ಶೂನ್ಯಕ್ಕೆ ಔಟ್ ಮಾಡಿದರು. ಭಾರತದ ಪರ ವಾಷಿಂಗ್ಟನ್ ಸುಂದರ್ 3 ರನ್ಗಳಿಗೆ 3 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಮತ್ತು ಶಿವಂ ದುಬೈ ತಲಾ ಎರಡು ವಿಕೆಟ್ ಪಡೆದರು.ಹರ್ಷದೀಪ್ ಸಿಂಗ್, ಬುಮ್ರಾ ಮತ್ತು ವರುಣ್ ಚಕ್ರವರ್ತಿ ತಲಾ ಒಂದು ವಿಕೆಟ್ ಪಡೆದರು.

ಭಾರತದ ಪರ ಶುಭಮನ್ ಗಿಲ್ 39 ಎಸೆತಗಳಲ್ಲಿ 46 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಅಭಿಷೇಕ್ ಶರ್ಮಾ 21 ಎಸೆತಗಳಲ್ಲಿ 28 ರನ್ ಗಳಿಸಿದರು ಮತ್ತು ನಾಯಕ ಸೂರ್ಯಕುಮಾರ್ ಯಾದವ್ 10 ಎಸೆತಗಳಲ್ಲಿ 20 ರನ್ ಗಳಿಸಿದರು.

ಮೊದಲ ಇನ್ನಿಂಗ್ಸ್ನಲ್ಲಿ ಉತ್ತಮ ಆರಂಭಿಕ ಪಾಲುದಾರಿಕೆಯೊಂದಿಗೆ ಉತ್ತಮ ರನ್ ಗಳಿಸಿದ್ದ ಭಾರತ ಮಧ್ಯಮ ಕ್ರಮಾಂಕದಲ್ಲಿ ಯಾವುದೇ ಗಮನಾರ್ಹ ಪ್ರಗತಿ ಸಾಧಿಸಲು ಸಾಧ್ಯವಾಗಲಿಲ್ಲ. ಇಂದಿನ ಗೆಲುವಿನೊಂದಿಗೆ, ಭಾರತ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿತು



