ಹಳೆಯಂಗಡಿ : ಮುಲ್ಕಿಯ ಹಳೆಯಂಗಡಿ ಸಮೀಪದ ಪ್ರಸಿದ್ಧ ಸಸಿಹಿತ್ತು ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮಹೋತ್ಸವ ಮಾರ್ಚ್ 4 ರಿಂದ 8 ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಪೂರ್ವಭಾವಿಯಾಗಿ ಮುಷ್ಟಿ ಕಾಣಿಕೆ ಸಮರ್ಪಣೆ ಮತ್ತು ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ಸಭಾ ವೇದಿಕೆಯಲ್ಲಿ ನ. 9 ಭಾನುವಾರ ಬೆಳಿಗ್ಗೆ 9.30ಕ್ಕೆ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಶ್ರೀಪತಿ ಭಟ್ ಹೊಯ್ದೆಗುಡ್ಡೆ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಕ್ಷೇತ್ರದ ಅರ್ಚಕ ಹಾಗೂ ಅನುವಂಶಿಕ ಮೊಕೇಸರ ಅಪ್ಪು ಯಾನೆ ಶ್ರೀನಿವಾಸ ಪೂಜಾರಿ, ಮುಷ್ಟಿ ಕಾಣಿಕೆಗೆ ಚಾಲನೆ ನೀಡಿದರು.


ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕ್ಷೇತ್ರದ ಆಡಳಿತ ಮೊಕೇಸರ ಚಂದ್ರಶೇಖರ ಬೆಲ್ಟಡ, ಆಡಳಿತ ಸಮಿತಿಯ ಅಧ್ಯಕ್ಷ ವಾಮನ್ ಇಡ್ಯಾ, ಧರ್ಮಪಾಲ ದೇವಾಡಿಗ, ಬ್ರಹ್ಮಕಲಶೋತ್ಸವ ಮುಂಬೈ ಸಮಿತಿಯ ಅಧ್ಯಕ್ಷ ವೇದಪ್ರಕಾಶ್ ಎಂ ಶ್ರೀಯಾನ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಭಾಕರ ಪೂಜಾರಿ, ಹಳೆಯಂಗಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪೂರ್ಣಿಮಾ, ಉದ್ಯಮಿ ಸುನೀಲ್ ಮಂಗಳೂರು, ಮತ್ತಿತರರು ಉಪಸ್ಥಿತರಿದ್ದರು ರಾಜೇಂದ್ರ ಕುಮಾರ್ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.


