ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಬ್ಯೂರೋ ಚೀಫ್ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ 2025-28 ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದರು.ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಶ್ರವಣ್ ಕುಮಾರ್ ನಾಳ 144 ಮತಗಳನ್ನು ಪಡೆದಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮುಹಮ್ಮದ್ ಆರೀಫ್, ವಿಲ್ಫ್ರೆಡ್ ಡಿ ಸೋಜ,ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾಗಿ ಸತೀಶ್ ಇರಾ, ಸಿದ್ದೀಕ್ ನೀರಾಜೆ, ಸುರೇಶ್ ಪಳ್ಳಿ ಆಯ್ಕೆಯಾಗಿದ್ದಾರೆ. ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ನಾಯಕ್ ಆಯ್ಕೆಯಾಗಿದ್ದಾರೆ.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಶೋಕ್ ಶೆಟ್ಟಿ ಬಿ.ಎನ್, ಸಂದೇಶ್ ಜಾರ, ಅಭಿಷೇಕ್ ಎಚ್.ಎಸ್., ಜಯಶ್ರೀ, ಭುವನೇಶ್ವರ ಜಿ, ಸಂದೀಪ್ ವಾಗ್ಲೆ, ಹರೀಶ್ ಕೆ.ಆದೂರ್, ಗಿರೀಶ್ ಅಡ್ಪಂಗಾಯ,ಹರೀಶ್ ಮೋಟುಕಾನ, ದಿವಾಕರ ಪದ್ಮುಂಜ, ಕಿರಣ್ ಯು. ಸಿರ್ಸಿಕರ್, ಸಂದೀಪ್ ಸಾಲ್ಯಾನ್, ಆರಿಫ್ ಕಲ್ಕಟ್ಟ, ಸಂದೀಪ್ ಕುಮಾರ್ ಎಂ, ಲಕ್ಷ್ಮೀನಾರಾಯಣ ರಾವ್ ಆಯ್ಕೆಯಾಗಿದ್ದಾರೆ.

