ಮುಂಬೈ : ಹಲವು ದಿನಗಳ ಚಿಕಿತ್ಸೆಯ ನಂತರ ಬುಧವಾರ ಬೆಳಿಗ್ಗೆ 7:30ಕ್ಕೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಹಿರಿಯ ನಟ ಧರ್ಮೇಂದ್ರ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು. ಧರ್ಮೇಂದ್ರ ಅವರ ಕುಟುಂಬವು ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲು ನಿರ್ಧರಿಸಿರುವುದರಿಂದ ಮನೆಯಲ್ಲೇ ಚಿಕಿತ್ಸೆಯನ್ನು ಮುಂದುವರಿಸಲಾಗಿವುದು ಎಂದು ನಟನಿಗೆ ಚಿಕಿತ್ಸೆ ನೀಡುತ್ತಿದ್ದ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ. ಪ್ರತೀತ್ ಸಮದಾನಿ ಹೇಳಿದರು.
ಬಾಲಿವುಡ್ನ ಹೀ-ಮ್ಯಾನ್ ಎಂದು ಪ್ರೀತಿಯಿಂದ ಕರೆಯಲ್ಪಡುವ 89 ವರ್ಷದ ತಾರೆಯನ್ನು ವೈದ್ಯಕೀಯ ಮೇಲ್ವಿಚಾರಣೆಗಾಗಿ ದಾಖಲಿಸಲಾಗಿತ್ತು ಮತ್ತು ನವೆಂಬರ್ 10 ರಂದು ಅವರನ್ನು ಐಸಿಯುಗೆ ಸ್ಥಳಾಂತರಿಸಲಾಯಿತು.

ನವೆಂಬರ್ 11 ರಂದು, ಅವರ ಪತ್ನಿ ಹೇಮಾ ಮಾಲಿನಿ ಮತ್ತು ಮಗಳು ಇಶಾ ಡಿಯೋಲ್ ಅವರು ಧರ್ಮೇಂದ್ರ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಧರ್ಮೇಂದ್ರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಅವರು ಮನೆಯಲ್ಲಿಯೇ ಚೇತರಿಸಿಕೊಳ್ಳಲಿದ್ದಾರೆ” ಎಂದು ಪುತ್ರ ಸನ್ನಿ ಡಿಯೋಲ್ ಅವರು ಮಾದ್ಯಮದವರಿಗೆ ತಿಳಿಸಿದ್ದಾರೆ, ಮಾಧ್ಯಮಗಳು ಮತ್ತು ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

