ಮಂಗಳೂರು : ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಸಾಧಿಸಿದ ಸರ್ವಾಂಗೀಣ ಸಾಧನೆಯನ್ನು ಪರಿಗಣಿಸಿ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಆಚರಣೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ ಬೆಂಗಳೂರು , ಕರ್ನಾಟಕ ಸಹಕಾರ ರಾಜ್ಯ ಮಾರಾಟ ಮಹಾಮಂಡಲ ನಿಯಮಿತ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ರವರ ಜಂಟಿ ಆಶ್ರಯದಲ್ಲಿ “ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ” ನೀಡಿ ಗೌರವಿಸಿದರು.

ಸಹಕಾರಿ ಮಹಾಮಂಡಲದ ಅಧ್ಯಕ್ಷರಾದ ಜಿ. ಟಿ. ದೇವೇಗೌಡ, ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ ಎನ್ ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು ಸೊಸೈಟಿಯ ಅಧ್ಯಕ್ಷರಾದ ಎಚ್ ವಸಂತ ಬರ್ನಾಡ್ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಸುದರ್ಶನ್ ಪಂಜ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

2023 -24 ಮತ್ತು 204 -25 ನೇ ಸಾಲಿನ ಸಾಧನೆಯನ್ನು ಗಮನಿಸಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಈಗಾಗಲೇ “ವಿಶಿಷ್ಟ ಸಾಧನ ಪ್ರಶಸ್ತಿ”ಯನ್ನು ನೀಡಿ ಗೌರವಿಸಿದ್ದು, ಇದೀಗ ಮೂರನೇ ಪ್ರಶಸ್ತಿ ಪಡೆದ ಪ್ರಿಯದರ್ಶಿನಿಕೋ ಆಪರೇಟಿವ್ ಸೊಸೈಟಿಯು ಉತ್ತಮ ಪ್ರಗತಿಯತ್ತ ಸಾಗುತ್ತಿದೆ.

