ಬೆಂಗಳೂರು : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಮಂಗಳೂರಿನಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಹೊರಡಿಸಿದ್ದ ಆದೇಶವನ್ನು ಇದೀಗ ಹೈಕೋರ್ಟ್ ರದ್ದುಗೊಳಿಸಿದೆ.
ಮಹೇಶ್ ಶೆಟ್ಟಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಪುರಸ್ಕರಿಸಿದ್ದು, ಗಡಿಪಾರು ಆದೇಶವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಸೂಕ್ತ ಕಾರಣ, ಸೆಕ್ಷನ್ ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದೆ
ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು.

