ಧಾರವಾಡ : ಧಾರವಾಡ ತಾಲೂಕು ಅಮ್ಮಿನಬಾವಿ ಗ್ರಾಮದ ಗ್ರಾಮದೇವಿ ದೇವಾಲಯದಲ್ಲಿ ನಡೆದ ಕಾರ್ತಿಕ ದೀಪೋತ್ಸವವನ್ನು ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಕಿರಿಯಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಸೇರಿದಂತೆ ಸುತ್ತಲಿನ ಹಲವು ಗ್ರಾಮಗಳ ಭಕ್ತರು ಪಾಲ್ಗೊಂಡು ಶ್ರೀಮಾತೆ ದುರ್ಗಾದೇವಿಗೆ ಹಾಗೂ ಶ್ರೀಮಾತೆ ದ್ಯಾಮವ್ವ ತಾಯಿಗೆ ದೀಪಗಳನ್ನು ಬೆಳಗಿ ಭಕ್ತಿ ಸಮರ್ಪಿಸಿದರು. ದೀಪೋತ್ಸವದ ಅಂಗವಾಗಿ ದಾಸೋಹ ಸೇವೆಯಲ್ಲಿ ಸಾಮೂಹಿಕ ಅನ್ನಸಂತರ್ಪಣೆ ಜರುಗಿತು.

