ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕಳೆದ ಮೂರು ತಿಂಗಳಿನಿಂದ ಶಿವಮೊಗ್ಗ ಜೈಲಿನಲ್ಲಿ ಬಂಧನದಲ್ಲಿದ್ದ ಚಿನ್ನಯ್ಯನಿಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ, ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ ಬೆನ್ನಲ್ಲೇ ಚಿನ್ನಯ್ಯ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆ ನಡುವೆಯೂ ಚಿನ್ನಯ್ಯ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದ್ದು, ಇಬ್ಬರು ಶ್ಯೂರಿಟಿಗಳೊಂದಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಸೇರಿ 12 ಷರತ್ತುಗಳನ್ನ ನ್ಯಾಯಾಲಯ ವಿಧಿಸಿದೆ.

