ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ನ್ಯಾಯಾಲಯವು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ.
ಮೂರು ವರ್ಷಗಳ ಸುದೀರ್ಘ ತನಿಖೆ ಬಳಿಕ ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದ ನ್ಯಾ.ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರಿದ್ದ ಪೀಠ ನಿರ್ದೋಷಿ ಅಂತ ತೀರ್ಪು ಪ್ರಕಟಿಸಿದೆ. ಪೋಕ್ಸೋ ಪ್ರಕರಣದಲ್ಲಿ ಶ್ರೀಗಳು ಹಾಗೂ ಇತರ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.

ಆಗಸ್ಟ್ 26 -2022ರಂದು ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು. ಅಪ್ರಾಪ್ತ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮುರುಘಾ ಮಠದ ಹಾಸ್ಟೆಲ್ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮುರುಘಾಶ್ರೀ ಮೊದಲ ಆರೋಪಿಯಾಗಿದ್ದು .ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.

