ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಹತ್ಯೆ ಮಾಡಲಾಗಿದೆ ಎಂದು ಅಫ್ಘಾನ್ ಟೈಮ್ಸ್ ಬುಧವಾರ ವರದಿ ಮಾಡಿದ್ದವು. ಇದು ಪಾಕಿಸ್ತಾನದಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಇಮ್ರಾನ್ ಖಾನ್ ಸುರಕ್ಷಿತವಾಗಿ ಮತ್ತು ಜೀವಂತವಾಗಿದ್ದರೆ, ಅವರನ್ನು ಭೇಟಿ ಮಾಡಲು ಏಕೆ ಅವಕಾಶ ನೀಡುತ್ತಿಲ್ಲ ಎಂದು ಅವರ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂಬ ವದಂತಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿದ ನಂತರ ಪಾಕಿಸ್ತಾನದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಸಾಮಾಜಿಕ ಮಾಧ್ಯಮಗಳು ಇಮ್ರಾನ್ ಖಾನ್ ಜೈಲಿನಲ್ಲಿ ಕೊಲ್ಲಲ್ಪಟ್ಟಿದ್ದಾರೆ “ಇಮ್ರಾನ್ ಖಾನ್ ನಿಧನರಾದರು” ಎಂಬಂತಹ ಪೋಸ್ಟ್ಗಳು ಫೇಸ್ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡುತ್ತಿವೆ. ಈ ವಿಷಯದ ಬಗ್ಗೆ ಪಾಕಿಸ್ತಾನದ ಸರ್ಕಾರ ಇನ್ನೂ ಯಾವುದೇ ದೃಢೀಕರಣ ಬಿಡುಗಡೆಯಾಗಿಲ್ಲ.

ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಇರಿಸಲಾಗಿರುವ ಇಮ್ರಾನ್ ಖಾನ್ ಅವರನ್ನು ಭೇಟಿ ಮಾಡಲು ಅವಕಾಶ ನೀಡದಿರುವುದು ಮತ್ತು ಅವರ ಸಹೋದರಿಯರು ಸೇರಿದಂತೆ ಅವರ ಸಂಬಂಧಿಕರಿಗೆ ಪ್ರವೇಶ ನಿರಾಕರಿಸಿರುವುದು ಈ ಊಹಾಪೋಹಗಳಿಗೆ ಕಾರಣವಾಗಿದೆ. ಇಮ್ರಾನ್ ಖಾನ್ ಅವರ ಸಹೋದರಿಯರಾದ ನೂರಿನ್ ನಿಯಾಜಿ, ಅಲೀಮಾ ಖಾನ್ ಮತ್ತು ಡಾ. ಉಜ್ಮಾ ಖಾನ್ ಇಮ್ರಾನ್ ಅವರನ್ನು ಭೇಟಿ ಮಾಡಲು ಯತ್ನಿಸುತ್ತಿದ್ದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸದಸ್ಯರನ್ನು ಅಡಿಯಾಲ ಜೈಲಿನ ಹೊರಗೆ ಪೊಲೀಸರು ತಡೆದಿದ್ದಾರೆ.

ಇಮ್ರಾನ್ ಖಾನ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಇಮ್ರಾನ್ ಸಹೋದರಿ ನೂರಿನ್ ನಿಯಾಜಿ ಹೇಳಿದರು. ನಾವು ರಸ್ತೆಗಳನ್ನು ನಿರ್ಬಂಧಿಸಲಿಲ್ಲ, ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಮಾಡಲಿಲ್ಲ ಮತ್ತು ಕಾನೂನುಬಾಹಿರವಾಗಿ ಏನನ್ನೂ ಮಾಡಲಿಲ್ಲ. ಆದರೂ, ಯಾವುದೇ ಎಚ್ಚರಿಕೆ ನೀಡದೆ, ಬೀದಿ ದೀಪಗಳನ್ನು ಇದ್ದಕ್ಕಿದ್ದಂತೆ ಆಫ್ ಮಾಡಿ. ಕತ್ತಲೆಯಲ್ಲಿ, ಪಂಜಾಬ್ ಪೊಲೀಸ್ ಅಧಿಕಾರಿಗಳು ನಮ್ಮ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದರು. 71 ವರ್ಷದ ಮಹಿಳೆಯನ್ನು ಆಕೆಯ ಕೂದಲು ಹಿಡಿದು ರಸ್ತೆಯಲ್ಲಿ ಎಳೆದಾಡಿ ಗಾಯಗೊಳಿಸಲಾಯಿತು ಎಂದು ಅವರು ಹೇಳಿದರು.

ಕಳೆದ ಮೂರು ವರ್ಷಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ನಾಗರಿಕರ ವಿರುದ್ಧ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸುತ್ತಿದ್ದಾರೆ. ಪೊಲೀಸರು ತೆಗೆದುಕೊಂಡ ಕ್ರಮವು ಪ್ರಜಾಪ್ರಭುತ್ವ ಸಮಾಜದಲ್ಲಿ ಯಾವುದೇ ಕಾನೂನು ಜಾರಿ ಅಧಿಕಾರಿಗಳ ಮೂಲಭೂತ ಕರ್ತವ್ಯಗಳಿಗೆ ವಿರುದ್ಧವಾಗಿದೆ ಎಂದು ನೂರಿನ್ ನಿಯಾಜಿ ಹೇಳಿದರು

ಅಡಿಯಾಲ ಜೈಲಿನ ಹೊರಗೆ ಸಾವಿರಾರು ಪಿಟಿಐ ಕಾರ್ಯಕರ್ತರು ಜಮಾಯಿಸಿ ಘೋಷಣೆಗಳನ್ನು ಕೂಗಿದರು. ಕಳೆದ ಒಂದು ತಿಂಗಳಿನಿಂದ ಇಮ್ರಾನ್ ಖಾನ್ ಜೈಲಿಗೆ ಭೇಟಿ ನೀಡುವುದನ್ನು ಸರ್ಕಾರ ನಿಷೇಧಿಸಿದೆ. ಇಮ್ರಾನ್ ಖಾನ್ ಆಗಸ್ಟ್ 2023 ರಿಂದ ಜೈಲಿನಲ್ಲಿದ್ದಾರೆ.

