ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಯ ಐತಿಹಾಸಿಕ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಅವರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲು ಭರದಿಂದ ಸಿದ್ಧತೆಗಳು ನಡೆಯುತ್ತಿವೆ.
ಪ್ರಧಾನಿ ಮೋದಿಯವರು ನಾಳೆ ಉಡುಪಿಯ ಪರ್ಯಾಯ ಪುತ್ತಿಗೆ ಶ್ರೀ ಕೃಷ್ಣ ಮಠದ ವತಿಯಿಂದ ನಡೆಸಲ್ಪಡುವ ಕೋಟಿ ಗೀತಾ ಲೇಖನ ಯಜ್ಞ ಅಭಿಯಾನ ಹಾಗೂ ಹೊಸದಾಗಿ ನಿರ್ಮಿಸಲಾದ ಸುವರ್ಣ ತೀರ್ಥ ಮಂಟಪವನ್ನು ಉದ್ಘಾಟಿಸಲಿದ್ದಾರೆ. ನಂತರ ನೆರೆದ ಭಕ್ತರೊಂದಿಗೆ ಗೀತಾ ಪಾರಾಯಣ ಮಾಡಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಎಂದು ಪರ್ಯಾಯ ಪುತ್ತಿಗೆ ಮಠ ತಿಳಿಸಿದೆ.

ಆದ್ದರಿಂದ ಉಡುಪಿಗೆ ಭೇಟಿ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆ 11.40 ರಿಂದ ಮಧ್ಯಾಹ್ನದವರೆಗೆ ಬನ್ನಂಜೆ ನಾರಾಯಣ ಗುರು ವೃತ್ತದಿಂದ ಕಲ್ಸಂಕ ವರೆಗೆ ರೋಡ್ ಶೋ ನಡೆಸಲಿದ್ದಾರೆ, ರೋಡ್ ಶೋ ನಂತರ ಮೋದಿ ಅವರು ಮಠದ ಪಾರ್ಕಿಂಗ್ ಪ್ರದೇಶ ಮತ್ತು ರಥಬೀದಿ ಮೂಲಕ ಶ್ರೀ ಕೃಷ್ಣ ಮಠ ಸಂಕೀರ್ಣಕ್ಕೆ ಪ್ರವೇಶಿಸಿ ಶ್ರೀ ಕೃಷ್ಣನ ದರ್ಶನ ಪಡೆಯಲಿದ್ದಾರೆ. ಈ ಸಂಧರ್ಭ ಶುಕ್ರವಾರ ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ರವರೆಗೆ ಶ್ರೀ ಕೃಷ್ಣ ಮಠಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ

