ಕಾಪು : ಗೂಡ್ಸ್ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ನಾಲ್ವರು ಮೃತಪಟ್ಟ ಘಟನೆ ಕಾಪು ಸಮೀಪದ ಕೋತಲ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಭಾನುವಾರ ಮಧ್ಯಾನ್ಹ ನಡೆದಿದೆ.

ಅಲಂಕಾರಿಕ ಸಾಮಾಗ್ರಿ ಸಾಗಾಟ ಮಾಡುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ಗೆ ಹತ್ತಿ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ ಎನ್ನಲಾಗಿದೆ. ಟೆಂಪೋದಲ್ಲಿ ಒಟ್ಟು ಹತ್ತು ಮಂದಿ ಕೆಲಸಗಾರರು ಇದ್ದರು ಎನ್ನಲಾಗಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆನ್ನಲಾಗಿದೆ. ಈ ಪೈಕಿ ನಾಲ್ವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮ್ರತಪಟ್ಟಿದ್ದಾರೆ ಎಂದು ತಿಳಿದುಬಂದಿದೆ
ಸ್ಥಳಕ್ಕೆ ಕಾಪು ಪೋಲಿಸ್ ವ್ತತ್ತ ನಿರೀಕ್ಷಕರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

