ಉತ್ತರ ಗೋವಾದ ಜಿಲ್ಲೆಯ ಅರ್ಪೋರಾದಲ್ಲಿರುವ ಜನಪ್ರಿಯ ರೆಸ್ಟೋರೆಂಟ್, ಕಾಕ್ಟೈಲ್ ಬಾರ್ ಮತ್ತು ಕ್ಲಬ್ ಬಿರ್ಚ್ ಬೈ ರೋಮಿಯೋ ಲೇನ್ನಲ್ಲಿ ಮಧ್ಯರಾತ್ರಿಯ ಸುಮಾರಿಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಲವಾರು ಪ್ರವಾಸಿಗರು ಸೇರಿದಂತೆ 25 ಜನರು ಸಾವನ್ನಪ್ಪಿದ್ದಾರೆ.
ಈ ಘಟನೆಯಲ್ಲಿ ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನವಾಗಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎಲ್ಲರೂ ಗೋವಾದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರಲ್ಲಿ ಮೂರರಿಂದ ನಾಲ್ಕು ಮಂದಿ ಪ್ರವಾಸಿಗರು ಮತ್ತು ಕ್ಲಬ್ನ 19 ಸಿಬ್ಬಂದಿ ಸೇರಿದ್ದಾರೆ. ಈ ಘಟನೆ ಬೆಳಗಿನ ಜಾವ ಸುಮಾರು 1 ಗಂಟೆ ವೇಳೆಗೆ ನಡೆದಿದೆ.

ಮೊದಲ ಮಹಡಿಯಲ್ಲಿ ಪ್ರಾರಂಭವಾದ ಬೆಂಕಿ ನಂತರ ಕಟ್ಟಡದ ಉಳಿದ ಭಾಗಗಳನ್ನು ಆವರಿಸಿದಂತೆ ಕಂಡುಬಂದಿದೆ. ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಕ್ಲಬ್ನ ನೆಲಮಾಳಿಗೆಯಲ್ಲಿ ಸಿಲುಕಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸತ್ತವರಲ್ಲಿ ಹೆಚ್ಚಿನವರು ಬೆಂಕಿಯ ಸಮಯದಲ್ಲಿ ನೆಲಮಾಳಿಗೆಯಲ್ಲಿದ್ದ ಕ್ಲಬ್ನ ಕೆಲಸಗಾರರಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಮೂರರಿಂದ ನಾಲ್ಕು” ಪ್ರವಾಸಿಗರು ಸಾವನ್ನಪ್ಪಿದ್ದಾರೆ ಆದರೆ ಸತ್ತವರನ್ನು ಗುರುತಿಸುವ ಪ್ರಕ್ರಿಯೆಯು ಮುಂದುವರೆದಿದೆ.

ಅಡುಗೆ ಕೋಣೆಯಲ್ಲಿ ಸಿಲಿಂಡರ್ ಸ್ಫೋಟವಾಗಿರಬಹುದು ಎಂದು ಮೊದಲು ಶಂಕಿಸಲಾಗಿತ್ತು ಆದರೆ ಪೊಲೀಸರ ತಪಾಸಣೆ ಸಮಯದಲ್ಲಿ ಸಿಲಿಂಡರ್ ಹಾಗೆಯೇ ಇತ್ತು.
ಸ್ಫೋಟದ ತೀವ್ರತೆ ಎಷ್ಟು ಪ್ರಬಲವಾಗಿತ್ತೆಂದರೆ, ಜ್ವಾಲೆಗಳು ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡವನ್ನು ಆವರಿಸಿಕೊಂಡಿತ್ತು. ತಪ್ಪಿಸಿಕೊಳ್ಳಲು ಒಳಗಿರುವವರಿಗೆ ತುಂಬಾ ಕಡಿಮೆ ಸಮಯ ಇತ್ತು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಗೊಂಡವರ ಸಂಖ್ಯೆ ಮತ್ತು ಸ್ಥಿತಿಯ ಕುರಿತು ಅಧಿಕೃತ ವಿವರಗಳು ಇನ್ನೂ ಲಭ್ಯವಿಲ್ಲ.ನೈಟ್ಕ್ಲಬ್ ಅನ್ನು ಸದ್ಯಕ್ಕೆ ಸೀಲ್ ಮಾಡಲಾಗಿದ್ದು, ಮಾಲೀಕರು ಮತ್ತು ಆಡಳಿತ ಮಂಡಳಿಯ ವಿಚಾರಣೆ ನಡೆಯುತ್ತಿದೆ.

ಗೋವಾದಲ್ಲಿ ನಮಗೆಲ್ಲರಿಗೂ ಇಂದು ತುಂಬಾ ನೋವಿನ ದಿನ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.
ಘಟನಾ ಸ್ಥಳಕ್ಕೆ ನಾನು ಭೇಟಿ ನೀಡಿದ್ದೇನೆ ಮತ್ತು ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದೇನೆ. ಇದಕ್ಕೆ ಕಾರಣರೆಂದು ಕಂಡುಬಂದವರು ಕಾನೂನಿನಡಿಯಲ್ಲಿ ಅತ್ಯಂತ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ – ಯಾವುದೇ ನಿರ್ಲಕ್ಷ್ಯವನ್ನು ದೃಢವಾಗಿ ಎದುರಿಸಲಾಗುವುದು.”ಎಂದಿದ್ದಾರೆ.

