ಬೆಂಗಳೂರು : ಭಾರತದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ ಐದು ಪ್ರಮುಖ ಪದಾಧಿಕಾರಿಗಳ ಹುದ್ದೆಗಳಲ್ಲಿ ನಾಲ್ಕನ್ನು ಗೆದ್ದುಕೊಂಡ ವೆಂಕಟೇಶ್ ಪ್ರಸಾದ್ ಅವರ ‘ಟೀಮ್ ಗೇಮ್ ಚೇಂಜರ್ಸ್’ ತಂಡಕ್ಕೆ ಇದು ಯಶಸ್ವಿ ಓಟವಾಗಿತ್ತು
ಟೀಮ್ ಗೇಮ್ ಚೇಂಜರ್ಸ್ ತಂಡವನ್ನು ಮುನ್ನಡೆಸುತ್ತಿರುವ ವೆಂಕಟೇಶ್ ಪ್ರಸಾದ್, ಬ್ರಿಜೇಶ್ ಪಟೇಲ್ ಬೆಂಬಲಿತ ತಂಡದ ಭಾಗವಾಗಿದ್ದ ಕೆ.ಎನ್. ಶಾಂತ್ ಕುಮಾರ್ ಅವರನ್ನು 749-558 ಅಂಕಗಳಿಂದ ಸೋಲಿಸಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಹೊಸ ಅಧ್ಯಕ್ಷರಾಗಿ ಹೊರಹೊಮ್ಮಿದರು.

ಟೀಮ್ ಗೇಮ್ ಚೇಂಜರ್ಸ್’ ಪರ ಭಾರತದ ಮಾಜಿ ಬ್ಯಾಟ್ಸ್ಮನ್ ಸುಜಿತ್ ಸೋಮಸುಂದರ್ ಉಪಾಧ್ಯಕ್ಷರಾಗಿ, ಸಂತೋಷ್ ಮೆನನ್ ಕಾರ್ಯದರ್ಶಿಯಾಗಿ ಮತ್ತು ಬಿಎನ್ ಮಧುಕರ್ ಖಜಾಂಚಿ ಆಯ್ಕೆಯಾಗಿದ್ದಾರೆ.
ಭಾನುವಾರ ಬೆಳಿಗ್ಗೆ ಮತದಾನವು ಭರದಿಂದ ಪ್ರಾರಂಭವಾಯಿತು, ಒಟ್ಟು 1,307 ಮತದಾರರು ಮತದಾನದಲ್ಲಿ ಭಾಗವಹಿಸಿದ್ದರು.ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಸೇರಿದಂತೆ ಹಲವು ಮತದಾರರು ಭಾಗವಹಿಸಿದ್ದರು.
2010ರಿಂದ 2013ರ ವರೆಗೆ ಕೆಎಸ್ಸಿಎ ಉಪಾಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಸೇವೆ ಸಲ್ಲಿಸಿದ್ದರು. ಆಗ ಅನಿಲ್ ಕುಂಬ್ಳೆ ಅಧ್ಯಕ್ಷರಾಗಿದ್ದರು. ಜಾವಗಲ್ ಶ್ರೀನಾಥ್ ಕಾರ್ಯದರ್ಶಿಯಾಗಿದ್ದರು.

