ಬೆಂಗಳೂರು : ಹಿರಿಯ ಕಾಂಗ್ರೆಸ್ ನಾಯಕ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಮಾಜಿ ಸಚಿವ,ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು 95 ನೇ ವಯಸ್ಸಿನಲ್ಲಿ ನಿಧನರಾದರು.
ಶಾಮನೂರು ಶಿವಶಂಕರಪ್ಪನವರು 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗುವ ಮೂಲಕ ರಾಜಕೀಯ ಪ್ರವೇಶಿಸಿದರು. ಅವರು 6 ಬಾರಿ ಶಾಸಕ, 1 ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಒಂದು ವಾರದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಸಂಜೆ 6:45ಕ್ಕೆ ಕೊನೆಯುಸಿರೆಳೆದಿದ್ದಾರೆ
ದಾವಣಗೆರೆಯಲ್ಲಿ ಬಾಪೂಜಿ ಮೆಡಿಕಲ್ ಹಾಗೂ ಎಂಜಿನಿಯರಿಂಗ್ ಅಸೋಸಿಯೇಷನ್ನ ಅಧ್ಯಕ್ಷರಾಗಿ ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದರು. ಕೈಗಾರಿಕೋದ್ಯಮಿಯಾಗಿ ಶ್ಯಾಮನೂರ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಸ್ಥಾಪಿಸಿ ಸಕ್ಕರೆ ಮತ್ತು ಡಿಸ್ಟಿಲರಿ ವ್ಯಾಪಾರದಲ್ಲಿ ಯಶಸ್ವಿಯಾಗಿದ್ದರು.

