ಕಟೀಲು : ಪ್ರತಿಭಾ ಸೌರಭದಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸೃಜನಶೀಲತೆ, ಕೌಶಲ್ಯ ಮತ್ತು ಹುಡುಕಾಟದ ಮನೋಭಾವವನ್ನು ಬೆಳಗಿಸುತ್ತವೆ ಎಂದು ಕಟೀಲು ದೇವಳದ ಅನುವಂಶಿಕ ಅರ್ಚಕರಾದ ವೇದಮೂರ್ತಿ ಲಕ್ಷ್ಮೀನಾರಾಯಣ ಆಸ್ರಣ್ಣ ತಿಳಿಸಿದರು.
ಅವರು ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನವಿಕಾಸ ಸಮಿತಿ ಮೂಲ್ಕಿಯ ಸಹಕಾರದೊಂದಿಗೆ ಮಕ್ಕಳ ಪ್ರತಿಭೆಯನ್ನು ಗುರುತಿ ಪ್ರೋತ್ಸಾಹಿಸಲು ಆಯೋಜಿಸಿದ ಪ್ರತಿಭಾ ಸೌರಭ ಉದ್ಘಾಟಿಸಿ ಮಾತನಾಡಿದರು.

ಮೂಲ್ಕಿ ತಾಲೂಕಿನ ಪ್ರೌಢಶಾಲೆಗಳ 425 ವಿದ್ಯಾರ್ಥಿಗಳು ಪ್ರಬಂಧ, ಚಿತ್ರಕಲೆ, ಭಾಷಣ, ಕಸದಿಂದ ರಸ ಸ್ಪರ್ಧೆಯಲ್ಲಿ ಭಾಗವಸಿದ್ದರು.
ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಲಯನ್ಸ್ ಕ್ಲಬ್ ಮೂಲ್ಕಿಯ ಅಧ್ಯಕ್ಷ ಹರ್ಷರಾಜ್ ಜಿ.ಎಂ. ಯುಗಪುರುಷ ಕಿನ್ನಿಗೋಳಿಯ ಭುವನಾಭಿರಾಮ ಉಡುಪ, ಜನ ವಿಕಾಸ ಸಮಿತಿ ಮೂಲ್ಕಿಯ ಅಧ್ಯಕ್ಷೆ ಅಕ್ಷತಾ ಶೆಟ್ಟಿ, ಪದಾಧಿಕಾರಿಗಳಾದ ಗೀತಾ ಶೆಟ್ಟಿ, ಶೋಭಾ ರಾವ್, ಕೊಡೆತ್ತೂರು ದಾಮೋದರ ಶೆಟ್ಟಿ ಉಪಸ್ಥಿತರಿದ್ದರು.
ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಸ್ವಾಗತಿಸಿದರು, ಜನ ವಿಕಾಸ ಸಮಿತಿ ಮೂಲ್ಕಿಯ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ಭಟ್ ದೇಂದಡ್ಕ ವಂದಿಸಿದರು, ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ಪ್ರಾಚಾರ್ಯ ಜಿತೇಂದ್ರ ವಿ. ರಾವ್ ಕಾರ್ಯಕ್ರಮ ನಿರೂಪಿಸಿದರು.

