ಮಂಗಳೂರು : ಬಜಪೆ, ಕಿನ್ನಿಗೋಳಿ ಪಟ್ಟಣ ಪಂಚಾಯತಿಗೆ ಡಿಸೆಂಬರ್ 21 ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಮಂಗಳೂರಿನ ಮಿನಿ ವಿಧಾನಸೌಧದಲ್ಲಿ ನಡೆಯಿತು 2 ಕಡೆ ಬಿಜೆಪಿ ಭರ್ಜರಿ ಗೆಲುವನ್ನು ಸಾಧಿಸಿ ಎರಡು ಪಟ್ಟಣ ಪಂಚಾಯತಿಯನ್ನು ಬಿಜೆಪಿ ತನ್ನ ವಶಕ್ಕೆ ಪಡೆದುಕೊಂಡಿದೆ.

ಬಜ್ಪೆಯಲ್ಲಿ ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನವನ್ನು ಪಡೆದಿದೆ, ಕಾಂಗ್ರೆಸ್ -4, ಎಸ್ ಡಿ ಪಿ ಐ -3 ಸ್ಥಾನ ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನವನ್ನು ಪಡೆದಿದ್ದಾರೆ. ಒಟ್ಟು 19 ವಾರ್ಡ್ಗಳಿಗೆ 59 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದರು.
ಕಿನ್ನಿಗೋಳಿ ಪಟ್ಟಣ ಪಂಚಾಯತ್ 18 ಸ್ಥಾನಗಳನ್ನು ಹೊಂದಿದ್ದು, ಅದರಲ್ಲಿ ಬಿಜೆಪಿ 10 ಸ್ಥಾನಗಳನ್ನು ಗೆದ್ದುಕೊಂಡಿದ್ದು, 8 ಸ್ಥಾನಗಳನ್ನು ಕಾಂಗ್ರೆಸ್ ಪಡೆದುಕೊಂಡಿದೆ. ಒಟ್ಟು 42 ಅಭ್ಯರ್ಥಿಗಳು ಕಣದಲ್ಲಿದ್ದರು. ಇಂದು ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯಲ್ಲಿ ಮತ ಎಣಿಕೆ ನಡೆಯಿತು.

