ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ನೈಜಿರಿಯಾ ಮೂಲದ ವ್ಯಕ್ತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಈತನಿಂದ 21 ಗ್ರಾಂ ಕೊಕೇನ್ ಹಾಗೂ 30 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಹೊಸ ವರ್ಷದ ಸಲುವಾಗಿ ಬೆಂಗಳೂರಿನ ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಇದೆ. ಇದರ ನಡುವೆ ನ್ಯೂಇಯರ್ ಪಾರ್ಟಿಗೆ ಡ್ರಗ್ಸ್ ಸಪ್ಲೈ ಮಾಡಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಈತ ಈ ಹಿಂದೆ ಕೂಡ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ. ಇತರ ಪ್ರದೇಶದಲ್ಲೂ ಕೂಡ ಪೊಲೀಸರ ವಿಶೇಷ ತಂಡ ಕಾರ್ಯಚರಣೆ ನಡೆಸಿದ್ದಾರೆ.

