ತುಮಕೂರು : ತುಮಕೂರು ಜಿಲ್ಲೆಯ ಸಿಂಗನಹಳ್ಳಿಯಲ್ಲಿ ತಾಯಿ ಹಾಗೂ ಮಕ್ಕಳ ಶವ ನೀರಿನ ಸಂಪ್ನಲ್ಲಿ ಪತ್ತೆಯಾಗಿದೆ. ಮ್ರತರನ್ನು ವಿಜಯಲಕ್ಷ್ಮೀ ಹಾಗೂ ಅವರ ಇಬ್ಬರು ಮಕ್ಕಳಾದ ಚೇತನ ಮತ್ತು ಚೈತನ್ಯ ಎಂದು ಗುರುತಿಸಲಾಗಿದೆ.
ವಿಜಯಲಕ್ಷ್ಮೀ ಪತಿ ಸಂಪತ್ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಾಗ ಪತ್ನಿ ಹಾಗೂ ಮಕ್ಕಳು ಕಾಣಿಸುತ್ತಿರಲಿಲ್ಲ. ಹೀಗಾಗಿ ಮನೆ ತುಂಬಾ ಹುಡುಕಾಟ ನಡೆದಿದ್ದಾರೆ, ಮಡದಿ ಮಕ್ಕಳು ಎಲ್ಲಿಯೂ ಕಾಣ ಸಿಗದಿದ್ದಾಗ ಸಂಪ್ ತೆರೆದಿರೋದು ಅವರ ಕಣ್ಣಿಗೆ ಬಿದ್ದಿದೆ. ಇಣುಕಿ ನೋಡಿದಾಗ ಮೂರು ಶವಗಳು ಕಾಣಿಸಿವೆ. ಕೂಡಲೇ ಈ ಬಗ್ಗೆ ಕ್ಯಾತ್ಸಂದ್ರ ಪೊಲೀಸರಿಗೆ ಸಂಪತ್ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು.ನಮ್ಮ ಸಾವಿಗೆ ಯಾರು ಕಾರಣವಲ್ಲ ಎಂದು ಅದರಲ್ಲಿ ವಿಜಯಲಕ್ಷ್ಮೀ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ ಹೀಗಾಗಿ ಮಾನಸಿಕ ಖಿನ್ನತೆಯಿಂದ ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತಳ ಸಹೋದರನ ದೂರಿನ ಆಧಾರದಲ್ಲಿ ತನಿಖೆ ಮುಂದುವರಿಸಿದ್ದಾರೆ.
ಮೂಲತಃ ಶಿವಗಂಗೆಯವರಾದ ಸಂಪತ್ ಕುಟುಂಬ ಕಳೆದ 30 ವರ್ಷಗಳಿಂದ ಸಿಂಗನಹಳ್ಳಿಯಲ್ಲಿ ವಾಸವಿದ್ದು, ಇತ್ತೀಚಿನ ಕೆಲ ವರ್ಷಗಳಿಂದ ಈ ಮನೆಯನ್ನು ಬಾಡಿಗೆಗೆ ಪಡೆದು ನೆಲೆಸಿದ್ದರು. ಸಂಪತ್ ಜೊತೆ ಪತ್ನಿ ವಿಜಯಲಕ್ಷ್ಮೀ, ಇಬ್ಬರು ಮಕ್ಕಳು ಹಾಗೂ ಆತನ ತಂದೆ ಹನುಮಂತರಾಜು ಮತ್ತು ತಾಯಿ ರೇಣುಕಮ್ಮ ಸಹ ವಾಸವಿದ್ದರು.

