ಮಂಗಳೂರು : ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಜನವರಿ 11ಕ್ಕೆ ಮಂಗಳೂರಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಿಎ.ಜಗನ್ನಾಥ್ ಕಾಮತ್ ಹೇಳಿದರು.

ಅವರು ನಗರದ ಖಾಸಗಿ ಹೊಟೇಲ್ ಹಾಲ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಕಾಶೀಮಠಾಧೀಶರಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಸಲು ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.
ಮಂಗಳೋತ್ಸವದ ಪೂರ್ವಭಾವಿಯಾಗಿ ಜನವರಿ ಐದಕ್ಕೆ ಕರ್ನಾಟಕ, ಕೇರಳದಿಂದ ಹೊರೆಕಾಣಿಕಾ ಸೇವಾ ಸಮರ್ಪಣೆ ನಡೆದಿದೆ. ದೇಶದ ವಿವಿಧೆಡೆಗಳಿಂದ ವ್ಯಾಸಧ್ವಜ ಸಂಕೀರ್ತನಾ ಪಾದಯಾತ್ರೆ ಮಂಗಳೂರಿಗೆ ಆಗಮಿಸುತ್ತಿದೆ ಎಂದ ಅವರು, ಈ ಭಾನುವಾರ ಶ್ರೀ ಕಾಶಿಮಠ ಸಂಸ್ಥಾನದ ಕೊಂಚಾಡಿಯಲ್ಲಿರುವ ಶಾಖಾಮಠಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ ಎಂದರು .

ಜನವರಿ 11 ರಂದು ಭಾನುವಾರ ಜನ್ಮಶತಾಬ್ದಿಯ ಮಂಗಳೋತ್ಸವ ನಡೆಯಲಿದ್ದು, ಮಧ್ಯಾಹ್ನ 3.30 ಕ್ಕೆ ಶ್ರೀ ಕಾಶೀಮಠ ಸಂಸ್ಥಾನದ ಕೊಂಚಾಡಿಯಲ್ಲಿರುವ ಶಾಖಾಮಠಕ್ಕೆ ಊರ, ಪರವೂರ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ,ಅಲ್ಲಿಂದ ಭಜನಾ ಸಂಕೀರ್ತನಾ ವ್ಯಾಸಧ್ವಜ ಮತ್ತು ಸ್ವಾಮೀಜಿಯವರ ಪಾದುಕಾ ದಿಗ್ವಿಜಯ ಪಾದಯಾತ್ರೆ ಆರಂಭವಾಗಲಿದೆ.
ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಸ್ವರ್ಣ ಪಾದುಕೆಯ ದಿಗ್ವಿಜಯ ಯಾತ್ರೆ ಹಿಮಾಲಯದ ತಪ್ಪಲಲ್ಲಿರುವ ಬದ್ರಿಯಿಂದ ಆರಂಭಿಸಿ ದಕ್ಷಿಣದಲ್ಲಿ ರಾಮೇಶ್ವರ, ತಿರುವನಂತಪುರದ ತನಕ ನಡೆದಿದೆ. ದೇಶದ ಉದ್ದಗಲಕ್ಕೂ ಇರುವ ಸಮಾಜ ಬಾಂಧವರ ಅಪೇಕ್ಷೆಯಂತೆ ಮನೆ,ಮಠ,ಮಂದಿರ,ದೇವಾಲಯಗಳಲ್ಲಿ ಪೂಜೆ ಸ್ವೀಕರಿಸಿ ಪಾದುಕಾ ದಿಗ್ವಿಜಯ ರಥಯಾತ್ರೆ ಮಂಗಳೂರನ್ನು ತಲುಪಿದೆ ಎಂದರು.

ಮಂಗಳೋತ್ಸವದ ಪೂರ್ವಭಾವಿಯಾಗಿ ಜನವರಿ 5 ರಂದು ಕರ್ನಾಟಕ, ಕೇರಳದಿಂದ ಹೊರೆಕಾಣಿಕಾ ಸೇವಾ ಸಮರ್ಪಣೆ ಪಾದಯಾತ್ರೆಯು ಕೊಂಚಾಡಿಯಿಂದ ಮೇರಿಹಿಲ್, ಯೆಯ್ಯಾಡಿ, ಕೆಪಿಟಿ,ಬಿಜೈ, ಕೆಎಸ್ ಆರ್ ಟಿಸಿ, ಲಾಲ್ ಭಾಗ್, ಎಂ.ಜಿ.ರಸ್ತೆ, ಪಿ.ವಿ.ಎಸ್ ಜಂಕ್ಷನ್ ನಿಂದ ಬಲಕ್ಕೆ ತಿರುಗಿ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತದ ಮೂಲಕ ಕೆನರಾ ಹೈಸ್ಕೂಲ್ ನಲ್ಲಿ ಸೇರಲಿದೆ. ಅಲ್ಲಿ ಹತ್ತು ಸಾವಿರ ಮಂದಿಗೆ ಫಲಾಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.ದಾರಿಯುದ್ದಕ್ಕೂ ಯೆಯ್ಯಾಡಿ, ಬಿಜೈ, ಲಾಲ್ ಭಾಗ್ ನ ನಿರ್ದಿಷ್ಟ ಜಾಗಗಳಲ್ಲಿ ಪಾನೀಯದ ವ್ಯವಸ್ಥೆ ಮಾಡಲಾಗಿದೆ.

ಪಾದಯಾತ್ರೆಯು ಕೊಂಚಾಡಿಯಿಂದ ಮೇರಿಹಿಲ್, ಯೆಯ್ಯಾಡಿ, ಕೆಪಿಟಿ,ಬಿಜೈ, ಕೆಎಸ್ ಆರ್ ಟಿಸಿ, ಲಾಲ್ ಭಾಗ್, ಎಂ.ಜಿ.ರಸ್ತೆ, ಪಿ.ವಿ.ಎಸ್ ಜಂಕ್ಷನ್ ನಿಂದ ಬಲಕ್ಕೆ ತಿರುಗಿ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತದ ಮೂಲಕ ಕೆನರಾ ಹೈಸ್ಕೂಲ್ ನಲ್ಲಿ ಸೇರಲಿದೆ. ಅಲ್ಲಿ ಹತ್ತು ಸಾವಿರ ಮಂದಿಗೆ ಫಲಾಹಾರದ ವ್ಯವಸ್ಥೆಯನ್ನು ಮಾಡಲಾಗಿದೆ. ದಾರಿಯುದ್ದಕ್ಕೂ ಯೆಯ್ಯಾಡಿ, ಬಿಜೈ, ಲಾಲ್ ಭಾಗ್ ನ ನಿರ್ದಿಷ್ಟ ಜಾಗಗಳಲ್ಲಿ ಪಾನೀಯದ ವ್ಯವಸ್ಥೆ ಮಾಡಲಾಗಿದೆ.
ಈ ಪಾದಯಾತ್ರೆಯಲ್ಲಿ ವಿವಿಧ ಊರ ಭಜನಾ ಮಂಡಳಿಗಳು ದೇವರ, ಸ್ವಾಮೀಜಿಯವರ ಭಜನೆಯನ್ನು ಹಾಡುತ್ತಾ, ಪಾದಯಾತ್ರೆಯಲ್ಲಿ ಸಾಗಲಿವೆ. ಚೆಂಡೆ, ಬ್ಯಾಂಡ್ ಸೆಟ್, ದೇವರ, ಮಹಾಪುರುಷರ ವೇಷಭೂಷಣಗಳನ್ನು ಧರಿಸಿದ ಮಕ್ಕಳ ಟ್ಯಾಬ್ಲೋಗಳು, ವೇದಘೋಷ, ವಾದ್ಯಗಳೊಂದಿಗೆ ಸ್ವಾಮೀಜಿಯವರ ಭಾವಚಿತ್ರ ಇರುವ ಟ್ಯಾಬ್ಲೋ, ಸ್ವಾಮೀಜಿಯವರ ಪಾದುಕೆ ಇರುವ ಟ್ಯಾಬ್ಲೋ ಸಹಿತ ವಿವಿಧ ಕಲಾಪ್ರಕಾರಗಳು ಪಾದಯಾತ್ರೆಯ ಶೋಭೆಯನ್ನು ಹೆಚ್ಚಿಸಲಿವೆ.
ಕೆನರಾ ಹೈಸ್ಕೂಲ್ ನಲ್ಲಿ ಭಕ್ತರು ಆಹಾರ ಸೇವಿಸಿದ ಬಳಿಕ ಪಾದಯಾತ್ರೆ ಡೊಂಗರಕೇರಿ, ನ್ಯೂಚಿತ್ರಾ, ಶ್ರೀನಿವಾಸ ಥಿಯೇಟರ್, ಸ್ವದೇಶಿ ಸ್ಟೋರ್ ತಲುಪಲಿದೆ. ಈ ಸಂದರ್ಭದಲ್ಲಿ ಪಾದಯಾತ್ರೆಯಲ್ಲಿ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿ ಇರಲಿದೆ. ಸ್ವದೇಶಿ ಸ್ಟೋರ್ ಬಳಿಯಿಂದ ಸ್ವರ್ಣ ಲಾಲಕಿಯಲ್ಲಿ ದೇವರೊಂದಿಗೆ ಪಾದಯಾತ್ರೆ ಶ್ರೀ ವೆಂಕಟರಮಣ ದೇವಸ್ಥಾನ ತಲುಪಲಿದೆ. ನಂತರ ಅಲ್ಲಿ ಮಂಗಳೋತ್ಸವದ ಸಭಾ ಕಾರ್ಯಕ್ರಮ ನಡೆಯಲಿದೆ.
ಮಂಗಳೋತ್ಸವ ಸಭಾ ಕಾರ್ಯಕ್ರಮ: ಜನವರಿ 11 ರಂದು ರಾತ್ರಿ 8.30 ರಿಂದ ಮಂಗಳೋತ್ಸವದ ಸಭಾ ಕಾರ್ಯಕ್ರಮದಲ್ಲಿ ಕಾಶೀಮಠಾಧೀಶ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಹಿರಿಯ ಯತಿವರೇಣ್ಯರೂ, ಮಹಾತಪಸ್ವಿಗಳಾದ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುಣಗಾನದೊಂದಿಗೆ ಆರ್ಶೀವಚನ ನೀಡಲಿದ್ದಾರೆ. ಈ ಸಮಯದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಊರ, ಪರವೂರ ಭಕ್ತರಿಗೆ ರಾತ್ರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು, ರಾತ್ರಿ 8.30 ರ ಬಳಿಕ ಮಹಾಮಾಯಾ ದೇವಸ್ಥಾನದ ಬಳಿ, ಉಮಾಮಹೇಶ್ವರ ದೇವಸ್ಥಾನದ ಬಳಿ, ಭವಂತಿ ಸ್ಟ್ರೀಟ್ ನಲ್ಲಿರುವ ಹಿಂದಿನ ನ್ಯೂ ಮಂಗಳೂರು ಹೆಲ್ತ್ ಕೇರ್ ಸೆಂಟರ್ ಜಾಗಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಅದನ್ನು ಸ್ವೀಕರಿಸಬೇಕಾಗಿ ವಿನಂತಿ.
ಸುದ್ದಿಗೋಷ್ಟಿಯಲ್ಲಿ ಶಾಸಕ ಡಿ.ವೇದವ್ಯಾಸ ಕಾಮತ್, ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಅಡಿಗೆ ಬಾಲಕೃಷ್ಣ ಶೆಣೈ, ಪ್ರಮುಖರಾದ ಕೋಟೇಶ್ವರ ದಿನೇಶ್ ಕಾಮತ್, ವಾಸುದೇವ್ ಕಾಮತ್, ರಘುವೀರ್ ಭಂಡಾರಕಾರ್, ಟಿ. ಗಣಪತಿ ಪೈ, ಪ್ರಶಾಂತ್ ಪೈ ಹಾಗೂ ಮುಖಂಡರು ಉಪಸ್ಥಿತರಿದ್ದರು.
.

