ಧಾರವಾಡ : ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಭಾಷೆಯ ಬೆರಳಚ್ಚು(ಟೈಪಿಂಗ್) ಪರೀಕ್ಷೆಗಳು ಜ.12 ರಂದು (ಸೋಮವಾರ) ರಾಜ್ಯವ್ಯಾಪಿ ಆರಂಭಗೊಳ್ಳಲಿವೆ.
ಜ.16ರಿಂದ ಇಂಗ್ಲೀಷ್ ಭಾಷೆಯ ಶೀಘ್ರಲಿಪಿ (ಶಾರ್ಟಹ್ಯಾಂಡ್) ಮತ್ತು ಜ.19 ರಿಂದ ಕನ್ನಡ ಭಾಷೆಯ ಶೀಘ್ರಲಿಪಿ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ರಾಜ್ಯ ನಿರ್ದೇಶಕ ಎಚ್.ಎನ್. ಗೋಪಾಲಕೃಷ್ಣ ಆದೇಶ ಹೊರಡಿಸಿ, ಎಲ್ಲಾ ಪರೀಕ್ಷೆಗಳನ್ನು ನಿಯಮಾನುಸಾರ ವ್ಯವಸ್ಥಿತವಾಗಿ ಜರುಗಿಸಲು ಸೂಚನೆ ನೀಡಿ, ಅಧಿಕೃತ ವೇಳಾಪಟ್ಟಿ ಪ್ರಕಟಿಸಿದ್ದಾರೆ.

ಅಭ್ಯರ್ಥಿಗಳು ಧಾರವಾಡ ಜಿಲ್ಲೆಯ ವ್ಯಾಪ್ತಿಯ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಮತ್ತು ಶೀಘ್ರಲಿಪಿ ಪರೀಕ್ಷೆಗಳ ಸಮಗ್ರ ಮಾಹಿತಿಗಾಗಿ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಕಚೇರಿ ಅಥವಾ ನವನಗರದ ಅನ್ನಪೂರ್ಣ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ ಸಂಸ್ಥೆಗೆ ಖುದ್ದಾಗಿ ಭೇಟಿ ನೀಡಬಹುದು.
ಜ.15ಮಕರ ಸಂಕ್ರಾಂತಿ ಹಾಗೂ ಜ.18 ರವಿವಾರ ರಜೆ ಇರುವುದರಿಂದ ಈ ದಿನಗಳಂದು ಪರೀಕ್ಷೆಗಳು ನಡೆಯುವದಿಲ್ಲ. ಹೆಚ್ಚಿನ ಮಾಹಿತಿಗೆ ಮೊ.ಸಂ. 9972952929 ಸಂಪರ್ಕಿಸುವಂತೆ ಜಿಲ್ಲಾ ಬೆರಳಚ್ಚು ಮತ್ತು ಶೀಘ್ರಲಿಪಿ ಸಂಸ್ಥೆಗಳ ಸಂಘದ ಅಧ್ಯಕ್ಷ ಅನಿಲಕುಮಾರ ಉಳ್ಳಾಗಡ್ಡಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

