ಧಾರವಾಡ : ನಗರದ ಕಮಲಾಪೂರ ವಿದ್ಯಾಚೇತನ ಎಜ್ಯೂಕೇಷನ್ ಸೊಸೈಟಿ ಸಮೂಹದ ಜ್ಞಾನಜ್ಯೋತಿ ವಿದ್ಯಾಲಯದ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ಆಶ್ರಯದಲ್ಲಿ ಜ.24 ರಂದು ಸಂಜೆ 4-30 ಗಂಟೆಗೆ ಜ್ಞಾನಜ್ಯೋತಿ ಸಾಂಸ್ಕೃತಿಕ ಉತ್ಸವವು ಪ್ರೌಢ ಶಾಲೆಯ ಆವರಣದಲ್ಲಿ ಜರುಗಲಿದೆ.

ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಅಭಿನವ ಶಾಂತಲಿ0ಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಉಪನಗರ ಪೊಲೀಸ್ ಠಾಣೆಯ ಸಿಪಿಐ ಪ್ರಭು ಗಂಗನಹಳ್ಳಿ ಉತ್ಸವ ಉದ್ಘಾಟಿಸುವರು.
ಡಿಡಿಪಿಐ ಎಸ್. ಎಸ್. ಕೆಳದಿಮಠ, ಮಹಾನಗರ ಪಾಲಿಕೆ ಸದಸ್ಯ ರಾಜು ಕಮತಿ, ಪಾಲಿಕೆಯ ಸಹಾಯಕ ಆಯುಕ್ತ ಅರವಿಂದ ಜಮಖಂಡಿ, ಶಿಕ್ಷಣ ಚಿಂತಕ ಮಲ್ಲಿಕಾರ್ಜುನ ಚಿಕ್ಕಮಠ ಹಾಗೂ ಕನ್ನಡ ಪತ್ರಿಕಾರಂಗದ ಹಿರಿಯ ನಿಯತಕಾಲಿಕ ‘ಜೀವನ ಶಿಕ್ಷಣ’ ಮಾಸಪತ್ರಿಕೆಯ ವಿಶ್ರಾಂತ ಸಂಪಾದಕ ಗುರುಮೂರ್ತಿ ಯರಗಂಬಳಿಮಠ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿದ್ಯಾಚೇತನ ಎಜ್ಯೂಕೇಷನ್ ಸೊಸೈಟಿ ಅಧ್ಯಕ್ಷ ಪುತ್ರಯ್ಯ ಹಿರೇಮಠ ಅಧ್ಯಕ್ಷತೆ ವಹಿಸುವರು. ಜ್ಞಾನಜ್ಯೋತಿ ಉತ್ಸವದ ಅಂಗವಾಗಿ ವೈವಿಧ್ಯಮಯ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ ಎಂದು ಎಜ್ಯೂಕೇಷನ್ ಸೊಸೈಟಿ ಕಾರ್ಯದರ್ಶಿ ಸಂಗಯ್ಯ ಟಿ. ಹಿರೇಮಠ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

