ತುಮಕೂರು : ಲಂಚ ಪ್ರಕರಣದಲ್ಲಿ ತುಮಕೂರಿನ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಚೇತನ ಕುಮಾರ್ ಲೋಕಾಯಕ್ತ ಬಲೆಗೆ ಬಿದ್ದಿದ್ದಾರೆ. 40 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಪೊಲೀಸ್ ಠಾಣೆಯಲ್ಲೇ ಲೋಕಾಯುಕ್ತ ಅಧಿಕಾರಿಗಳು ಅವರನ್ನು ಖೆಡ್ಡಾಕ್ಕೆ ಕೆಡವಿದ್ದಾರೆ.
ಪ್ರಕರಣ ಒಂದರಲ್ಲಿ ವಶಪಡಿಸಿಕೊಂಡಿದ್ದ ಕಾರನ್ನು ವಾಪಸ್ ನೀಡುವ ನೆಪದಲ್ಲಿ ಪಿಎಸ್ಐ ಚೇತನ ಕುಮಾರ್ ಅವರು 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು.ಮೊದಲ ಹಂತವಾಗಿ 40 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲೇ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿ ರೆಡ್ಹ್ಯಾಂಡ್ ಆಗಿ ಅವರನ್ನು ಬಂಧಿಸಿದ್ದಾರೆ.
ಲಂಚ ಸ್ವೀಕರಿಸುತ್ತಿದ್ದ ಕ್ಷಣದಲ್ಲೇ ದಾಳಿ ನಡೆಸಿದ ಲೋಕಾಯುಕ್ತ ತಂಡ, ಪಿಎಸ್ಐ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

