ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಬಿಜೆಪಿಯ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿರುವ ಕೆ. ಅಣ್ಣಾಮಲೈ ಅವರು, ತಮಗೆ ವಹಿಸಲಾಗಿದ್ದ 6 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಜವಾಬ್ದಾರಿಯಿಂದ ಹಿಂದೆ ಸರಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ
ತಮ್ಮ ನಿರ್ಧಾರದ ಕುರಿತು ಸ್ಪಷ್ಟನೆ ನೀಡಿರುವ ಅಣ್ಣಾಮಲೈ ಅವರು, ನನ್ನ ತಂದೆಯವರ ಆರೋಗ್ಯ ಹದಗೆಟ್ಟಿದೆ. ಈ ಸಮಯದಲ್ಲಿ ಅವರ ಜೊತೆಗಿದ್ದು ಅವರನ್ನು ನೋಡಿಕೊಳ್ಳುವುದು ನನ್ನ ಮೊದಲ ಕರ್ತವ್ಯವಾಗಿದೆ. ಕೊಯಮುತ್ತೂರಿನಲ್ಲಿಯೇ ವಾಸ್ತವ್ಯ ಹೂಡಬೇಕಿರುವುದರಿಂದ, ಚುನಾವಣಾ ಕೆಲಸಗಳಿಗಾಗಿ ರಾಜ್ಯಾದ್ಯಂತ ಹೆಚ್ಚು ಪ್ರಯಾಣ ಮಾಡಲು ನನಗೆ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜವಾಬ್ದಾರಿಯಿಂದ ಹಿಂದೆ ಸರಿದಿದ್ದೇನೆ ಈ ಜವಾಬ್ದಾರಿಯನ್ನು ಇತರೆ ಸೂಕ್ತ ನಾಯಕರಿಗೆ ನೀಡುವಂತೆ ರಾಜ್ಯಾಧ್ಯಕ್ಷರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
ಒಟ್ಟಾರೆಯಾಗಿ, ಅಣ್ಣಾಮಲೈ ಅವರ ಈ ನಡೆ ತಮಿಳುನಾಡು ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇದು ಕೇವಲ ತಂದೆಯ ಅನಾರೋಗ್ಯವೋ ಅಥವಾ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಇದೆಯೇ ಎಂದು ಕುತೂಹಲ ಮೂಡಿದೆ.

