ಮೂಲ್ಕಿ ; ಇಲ್ಕಿನ ಮೂಲ್ಕಿಯ ಯುವ ರಾಜಕೀಯ – ಸಾಮಾಜಿಕ ನೇತಾರ ಅಶೋಕ್ ಪೂಜಾರ್ ಅವರು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಗ್ಗೆ ಮಾಧ್ಯಮದೊಂದಿಗೆ ಹರ್ಷ ವ್ಯಕ್ತಪಡಿಸಿ, ಮಾತನಾಡಿ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹಾಗೂ ಜಿಲ್ಲೆಯಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ಮೂಡಿಸಿದ ಸದಾ ನನ್ನ ರಾಜಕೀಯ ಚಟುವಟಿಕೆಗೆ ಬೆನ್ನೆಲುಬಾಗಿ ನಿಂತಿರುವ ರಾಜಕೀಯ ಗುರುಗಳಾದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರೇ ನನಗೆ ಸೂಕ್ತ ಸ್ಥಾನಮಾನ ಸಿಗಲು ಪ್ರಮುಖ ಕಾರಣರಾಗಿದ್ದಾರೆ ಎಂದರು.
ಮೂಲ್ಕಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ನಾಯಕರ ಮಾರ್ಗದರ್ಶನದ ಜೊತೆಗೆ ಯುವ ಸಮುದಾಯದ ಸಹಕಾರದಲ್ಲಿ ಪಕ್ಷವನ್ನು ಬಲಗೊಳಿಸುವ ಅನೇಕ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದರು.

