ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆಬ್ರವರಿ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಫೆಬ್ರವರಿ 10 ರಂದು ಬೆಳಿಗ್ಗೆ 7:55 ಮಂಗಳೂರು ವಿಮಾನ ನಿಲ್ದಾಣ ಆಗಮನ, 9:30- ಮಂಗಳೂರು ನಗರಕ್ಕೆ ನೀರು ಪೂರೈಸುವ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೇತ್ರಾವತಿ ನದಿಗೆ ಗಂಗಾ ಪೂಜೆ, ಬೆಳಿಗ್ಗೆ 10:45- ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ, ಸಂಜೆ 4:30 ಮಾಣಿ ಜಂಕ್ಷನ್ನಲ್ಲಿ ಜಿಲ್ಲಾ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಆಯೋಜಿಸಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಚಾವೋ ಸಂಗ್ರಾಮ್ ಪಾದಯಾತ್ರೆಯ ಆ ದಿನದ ಸಮಾರೋಪ ಕಾರ್ಯಕ್ರಮ, ರಾತ್ರಿ ನಗರದಲ್ಲಿ ವಾಸ್ತವ್ಯ. ಫೆಬ್ರವರಿ 11ರಂದು ಬೆಳಿಗ್ಗೆ 6:15 ಗಂಟೆಗೆ ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

