ಕಲಬುರಗಿ : ಕಲಬುರಗಿ ಜಿಲ್ಲೆಯ ಆಳಂದದ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವರಾತ್ರಿಯಂದು ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ನಿಮಿತ್ತ ಪೂಜೆಗೆ ಕಲಬುರಗಿ ಹೈಕೋರ್ಟ್ ಪೀಠ ಅನುಮತಿ ನೀಡಿದೆ. ಪ್ರತಿ ವರ್ಷದಂತೆ ಈ ವರ್ಷವು ಶಿವರಾತ್ರಿಯಂದು ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅರ್ಜಿದಾರ ಸಿದ್ರಾಮಯ್ಯ ಹಿರೇಮಠ ಕಲಬುರಗಿ ಹೈಕೋರ್ಟ್ ಪೀಠಕ್ಕೆ ರೀಟ್ ಅರ್ಜಿ ಸಲ್ಲಿಸಿದರು.


ಸಲ್ಲಿಸಿದ ಅರ್ಜಿಯನ್ನು ಆಲಿಸಿದ ಹೈಕೋರ್ಟ್ ಪೀಠ ಹಿರೇಮಠ್ ಎಂಬವರಿಗೆ ಮಾತ್ರ ಅವಕಾಶ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಫೆಬ್ರವರಿ 15 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 15 ಜನರಿಗೆ ಮಾತ್ರ ಪೂಜೆ ಸಲ್ಲಿಸಲು ಅವಕಾಶ ನೀಡಿ ಆದೇಶಿಸಿದೆ. ಹಾಗೇ ಪೂಜೆ ಸಲ್ಲಿಸಲು ತೆರಳುವ ಅರ್ಜಿದಾರರಿಗೆ ಭದ್ರತೆ ಕಲ್ಪಿಸಬೇಕು. ಒಂದು ವೇಳೆ ಕಾನೂನು ಸುವ್ಯವಸ್ಥೆ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಸೂಚನೆ ನೀಡಿದೆ.


