ಮಂಗಳೂರು :- ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್(ರಿ ಮತ್ತು ಆರ್ಯ ಯಾನೆ ಮರಾಠ ಸಮಾಜ ಸಂಘ(ರಿ.) ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಫೆಬ್ರವರಿ 19 ರಂದು ಬೆಳಿಗ್ಗೆ 10.30 ಗಂಟೆಗೆ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಛತ್ರಪತಿ ಶಿವಾಜಿ ಜಯಂತಿ ಹಮ್ಮಿಕೊಳ್ಳಲಾಗಿದೆ.
ಸ್ಪೀಕರ್ ಯು.ಟಿ ಖಾದರ್ ಘನ ಉಪಸ್ಥಿತಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.

