ಕಡಬ : ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಐನೆಕಿದು ಗ್ರಾಮದ ಕಲ್ಲಾಜೆ ಎಂಬಲ್ಲಿ ಹೊಳೆಯಲ್ಲಿ ನಡೆದಿದೆ.
ಹೊಳೆಯಲ್ಲಿ ಅಕ್ರಮವಾಗಿ ಇಟಾಚಿ ವಾಹನದ ಮೂಲಕ ಮರಳು ತೆಗೆಯಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ಜಿ.ವಿ ರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ ಆರೋಪಿತರು ಸ್ಥಳದಿಂದ ಪರಾರಿಯಾಗಿದ್ದಾರೆ.ಟಾಟಾ ಇಟಾಚಿ ಮತ್ತು KA-21-B-3929 ಈಚರ್ ಟಿಪ್ಪರ್ ಹಾಗೂ KA-20-D-7639 ಟಿಪ್ಪರ್ ಲಾರಿಗಳನ್ನು ಮಹಜರು ಮೂಲಕ ಸ್ವಾಧೀನಪಡಿಸಿಕೊಳ್ಳಲಾಗಿದೆ.

ಸುಮಾರು 50 ಟನ್ ಮರಳು (ಅಂದಾಜು ಮೌಲ್ಯ ₹50,000) ಪತ್ತೆಯಾಗಿದೆ. ಸ್ವಾಧೀನಪಡಿಸಿದ ವಾಹನಗಳ ಒಟ್ಟು ಅಂದಾಜು ಮೌಲ್ಯ ₹20 ಲಕ್ಷ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 08/2026 ರಂತೆ ಕಲಂ 303(2) BNS-2023, 4(1), 21(1) MMRD Act ಹಾಗೂ 43, 44 KMMCR 1994 ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


