ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರ ತಂದೆ ಖಾನ್ ಚಂದ್ ಸಿಂಗ್ ನಿಧನರಾಗಿದ್ದಾರೆ. 4ನೇ ಹಂತದ ಲಿವರ್ ಕ್ಯಾನ್ಸರ್ ನಿಂದ ಹೋರಾಡುತ್ತಿದ್ದ ಅವರು ಇಂದು ಗ್ರೇಟರ್ ನೋಯ್ಡಾದ ಯಥಾರ್ಥ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ಗಮನಾರ್ಹವಾಗಿ ಹದಗೆಟ್ಟಿತು, ನಂತರ ಫೆಬ್ರವರಿ 21ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮತ್ತು ಅವರಿಗೆ ಜೀವರಕ್ಷಕ ಮತ್ತು ವೆಂಟಿಲೇಟರ್ ಅಳವಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದರು. ಅವರಿಗೆ 58 ವರ್ಷ ವಯಸ್ಸಾಗಿತ್ತು.

ರಿಂಕು ಅವರ ತಂದೆ ಖಾನ್ಚಂದ್ ಸಿಂಗ್ ತಮ್ಮ ಕುಟುಂಬವನ್ನು ಪೋಷಿಸಲು ಮತ್ತು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಅವಿಶ್ರಾಂತವಾಗಿ ಶ್ರಮಿಸುತ್ತಿದ್ದರು ಅವರು ಮನೆಮನೆಗೆ ಗ್ಯಾಸ್ ಸಿಲಿಂಡರ್ ಪೂರೈಕೆದಾರರಾಗಿ ಕೆಲಸ ಮಾಡುತ್ತಿದ್ದರು ಮತ್ತು ಅವರ ಕುಟುಂಬವನ್ನು ಪೋಷಿಸಲು ತುಂಬಾ ಕಷ್ಟಪಡುತ್ತಿದ್ದರು
ಆರಂಭ ದಿನಗಳಲ್ಲಿ ತಮ್ಮ ಮಗ ಕ್ರಿಕೆಟ್ ಆಡುವುದನ್ನು ವಿರೋಧಿಸುತ್ತಿದ್ದರು. ನಂತರದ ದಿನಗಳಲ್ಲಿ ಮಗನ ಅಟವನ್ನು ಕಂಡು ಅಪಾರ ಆರ್ಥಿಕ ಸವಾಲುಗಳ ಹೊರತಾಗಿಯೂ, ರಿಂಕು ಅವರ ಆಕಾಂಕ್ಷೆಗಳಿಗೆ ಬೆಂಬಲ ನೀಡಿದರು ಮತ್ತು ಅಂತರರಾಷ್ಟ್ರೀಯ ಕ್ರಿಕೆಟಿಗರಾಗಿ ರಿಂಕು ಅವರ ಏಳಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದರು. ಕ್ರಿಕೆಟಿಗನಾಗುವ ಕನಸನ್ನು ನನಸಾಗಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡಿದರು. ಕಳೆದ ವರ್ಷವಷ್ಟೇ ರಿಂಕು ಅವರಿಗೆ 3.19 ಲಕ್ಷ ರೂ. ಮೌಲ್ಯದ ಕವಾಸಕಿ ನಿಂಜಾ ಬೈಕ್ ಅನ್ನು ಉಡುಗೊರೆಯಾಗಿ ನೀಡಿದರು.

ರಿಂಕು ಸಿಂಗ್ ತಮ್ಮ ತಂದೆಯ ಸ್ಥಿತಿ ಗಂಭೀರವಾದ ಕಾರಣ ಟಿ20 ವಿಶ್ವಕಪ್ನಿಂದ ಅರ್ಧದಲ್ಲೇ ಹೊರನಡೆಯ ಬೇಕಾಯಿತು. ಫೆಬ್ರವರಿ 26 ರಂದು ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಅವರು ಚೆನ್ನೈನಲ್ಲಿ ಭಾರತೀಯ ತಂಡವನ್ನು ಮತ್ತೆ ಸೇರಿಕೊಂಡರು.

