ಉಡುಪಿ : ಉಡುಪಿಯ ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರ ತಂಡವೊಂದು ಚೂರಿ ಇರಿದ ಘಟನೆ ನಿನ್ನೆ ರಾತ್ರಿ ಮಲ್ಪೆಯಲ್ಲಿ ನಡೆದಿದೆ.
ತೀವ್ರವಾಗಿ ಗಾಯಗೊಂಡ ಮಂಜು ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರು ನಿನ್ನೆ ರಾತ್ರಿ ಬೀಚ್ ಬಳಿ ಜೋಡಿಯೊಂದರ ಪ್ರೇಮದ ವಿಚಾರವಾಗಿ ರಾಜಿ ಪಂಚಾಯಿತಿಗೆ ಕರೆದಿದ್ದರು.ಧನುಷ್ ಎಂಬ ಯುವಕನ ವಿಚಾರದಲ್ಲಿ ಈ ಜಗಳ ನಡೆದಿದ್ದು. ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ಯುವಕ ಚೂರಿ ಇರಿದಿದ್ದಾನೆ ಎಂದು ತಿಳಿದುಬಂದಿದೆ. ಹೊಟ್ಟೆ ಭಾಗಕ್ಕೆ ಇರಿದ ಪರಿಣಾಮ ಅಲ್ಲೆ ಕುಸಿದು ಬಿದ್ದ ಮಂಜು ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ .
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಉಡುಪಿ ಪಲಿಮಾರು ನಿವಾಸಿಗಳಾದ ಪುನೀತ್, ಅಭಿಜಿತ್, ಪ್ರಜ್ಞೇಶ್, ಅಮೃತ್ ಭಂಡಾರಿ, ಅವರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

