ಪಶ್ಚಿಮ ಏಷ್ಯಾದ ರಾಜಕೀಯ ಚಿತ್ರಣ ಕ್ಷಣಕ್ಷಣಕ್ಕೂ ಭೀಕರ ಸ್ವರೂಪ ಪಡೆಯುತ್ತಿದೆ. ಇರಾನ್ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹತ್ಯೆಯಾದ ಬೆನ್ನಲ್ಲೇ, ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಮೊಜ್ತಾಬಾ ಖಮೇನಿ ವಿರುದ್ಧ ಅಮೆರಿಕ ಕಣ್ಣು ಹಾಕಿದೆ. ಮೊಜ್ತಾಬಾ ಖಮೇನಿ ಬಗ್ಗೆ ಸುಳಿವು ನೀಡಿದವರಿಗೆ ಬರೋಬ್ಬರಿ 10 ಮಿಲಿಯನ್ ಡಾಲರ್ (ಸುಮಾರು 92.47 ಕೋಟಿ ರೂಪಾಯಿ) ನಗದು ಬಹುಮಾನ ನೀಡುವುದಾಗಿ ಅಮೆರಿಕದ ವಿದೇಶಾಂಗ ಇಲಾಖೆ ಘೋಷಿಸಿದೆ.

ಅಮೆರಿಕದ ಡಿಪ್ಲೊಮ್ಯಾಟಿಕ್ ಸೆಕ್ಯುರಿಟಿ ಸರ್ವಿಸ್ ಅಡಿಯಲ್ಲಿ ನಡೆಯುವ ‘ರಿವಾರ್ಡ್ಸ್ ಫಾರ್ ಜಸ್ಟೀಸ್’ ಅಭಿಯಾನವು ಮೊಜ್ತಾಬಾ ಖಮೇನಿ ಮತ್ತು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಗೆ ಸಂಬಂಧಿಸಿದ ಹಲವು ಉನ್ನತ ಮಟ್ಟದ ಅಧಿಕಾರಿಗಳ ಭಾವಚಿತ್ರಗಳನ್ನು ಬಿಡುಗಡೆ ಮಾಡಿದೆ. ಈ ವ್ಯಕ್ತಿಗಳು ವಿಶ್ವದಾದ್ಯಂತ ಭಯೋತ್ಪಾದಕ ಚಟುವಟಿಕೆಗಳನ್ನು ಯೋಜಿಸುವ ಮತ್ತು ಕಾರ್ಯಗತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂಬುದು ಅಮೆರಿಕದ ಗಂಭೀರ ಆರೋಪವಾಗಿದೆ. ಹೀಗಾಗಿ ಖಮೇನಿ ಸೇರಿದಂತೆ ತಮ್ಮ ಲಿಸ್ಟ್ನಲ್ಲಿರುವ ಇತರೆ ವ್ಯಕ್ತಿಗಳ ಮಾಹಿತಿ ನೀಡುವವರ ಗೌಪ್ಯತೆಯನ್ನು ಕಾಪಾಡಲು ಟಾರ್ ಆಧಾರಿತ ಟಿಪ್ಲೈನ್ ಅಥವಾ ಸಿಗ್ನಲ್ ಆ್ಯಪ್ ಮೂಲಕ ಮಾಹಿತಿ ಹಂಚಿಕೊಳ್ಳಲು ಸೂಚಿಸಲಾಗಿದೆ.

ಇರಾನ್ ಹೊಸ ನಾಯಕ ಮೊಜ್ತಾಬಾ ತಲೆತಪ್ಪಿಸಿಕೊಂಡು ಹೋಗುತ್ತಿದ್ದರು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಯಾವ ತಿರುವು ಪಡೆಯುತ್ತದೆ ಎಂಬುದು ತಿಳಿಯುತ್ತದೆ ಕುತೂಹಲ ಮೂಡಿಸಿದೆ.

