ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ,ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ.
ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ – ಕುಟೀರವನ್ನು ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವ ಉದ್ದೇಶದಿಂದ ಒಂದು ಧಾರ್ಮಿಕ ಶ್ರದ್ಧಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ದೈವಾರ್ಷಿಕ ಕಾರ್ಯ ಯೋಜನೆಯನ್ನು ಕೈಗೊಳ್ಳಲಾಗಿದೆ.

ಪ್ರತಿಯೊಬ್ಬರೂ ಕುಟುಂಬ ಸಮೇತರಾಗಿ ಕಾಸರಗೋಡು ಕನ್ನಡ ಗ್ರಾಮಕ್ಕೆ ಆಗಮಿಸಿ ಕಾಸರಗೋಡು ಗೋ-ಕುಟೀರದಲ್ಲಿ ಗೋವುಗಳಿಗೆ ಗೋ-ಗ್ರಾಸ ನೀಡಿ, ಗೋ- ಆರತಿಯನ್ನು ಬೆಳಗಿಸಿ, ಗೋ-ಸಂಕೀರ್ತನೆಯನ್ನು ಹಾಡಿ, ಗೋ-ಕುಟೀರದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ತಮ್ಮ ಇಷ್ಟಾರ್ಥವನ್ನು ಶ್ರದ್ಧಾ ಭಕ್ತಿಯಿಂದ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತಮ್ಮ ಮನೆಗಳಲ್ಲಿ ನಡೆಯುವ ಶುಭ ಸಮಾರಂಭಗಳ ನಿಮಿತ್ತ ಕಾಸರಗೋಡು ಗೋ -ಕುಟೀರಕ್ಕೆ ಆಗಮಿಸಿ ಗೋ ಮಾತೆಯ ಸೇವೆ ಸಲ್ಲಿಸಿ ಕುಟುಂಬದವರು ಸಂಭ್ರಮವನ್ನು ಹಂಚಿಕೊಳ್ಳಲು ಉದ್ದೇಶಿಸಲಾಗಿದೆ.
ಕಾಸರಗೋಡು ಗೋ – ಕುಟೀರದ ಆವರಣದಲ್ಲಿ ನಿರ್ಮಾಣವಾಗಲಿರುವ “ಕಾಮಧೇನು- ಕಲ್ಪವೃಕ್ಷ ಗೋ- ವಿಶ್ರಾಂತಿ ಗೃಹ “ದಲ್ಲಿ ಗೋ- ಭಕ್ತರು, ಗೋ-ಪೋಷಕರು, ದಾನಿಗಳಿಗೆ ವಿಶ್ರಾಂತಿ ಪಡೆಯಲು ಅವಕಾಶ ನೀಡಲಾಗುವುದು.
ಕಾಸರಗೋಡು ಗೋ-ಕುಟೀರ (KASARAGOD GO- KUTEERA)ದ ಪರಿಸರದಲ್ಲಿ ನಿರ್ಮಾಣವಾಗಲಿರುವ “ಕಾಸರಗೋಡು ಕೃಷಿ ಕುಟೀರ”(KASARAGOD KRISHI KUTEERA)ದಲ್ಲಿ ವಿವಿಧ ಸಂಘ ಸಂಸ್ಥೆಗಳು, ಬ್ಯಾಂಕ್, ಉದ್ಯಮ, ಕೈಗಾರಿಕಾ ಸಂಸ್ಥೆಗಳು, ದೇವಸ್ಥಾನ,ಮಠ, ಮಂದಿರ, ವಿವಿಧ ಟ್ರಸ್ಟ್ ಗಳ ನೆರವಿನ ಪ್ರಾಯೋಜಕತ್ವದಡಿಯಲ್ಲಿ ಸಾವಯವ ಕೃಷಿ,ಗ್ರಾಮೀಣ ಸ್ವ- ಉದ್ಯೋಗ ಕೇಂದ್ರ, ವಿದ್ಯಾರ್ಥಿಗಳು,ಯುವಜನರು, ಮಹಿಳೆಯರು, ಮಹಿಳಾ ಉದ್ಯೋಗಿಗಳಿಗಾಗಿ ಹೊಲಿಗೆ, ವಸ್ತ್ರ,ವಿನ್ಯಾಸ,ಡಿಸೈನಿಂಗ್ ಕೇಂದ್ರ,ಕಂಪ್ಯೂಟರ್, ಡಿಜಿಟಲ್ ಮಾಧ್ಯಮ ಕೇಂದ್ರ, ಕಲಾ ಗ್ಯಾಲರಿ,ಜಾನಪದ ವಸ್ತು ಸಂಗ್ರಹಾಲಯ, ಹಿರಿಯ ನಾಗರಿಕರಿಗಾಗಿ ಗ್ರಾಮೀಣ ವೈದ್ಯಕೀಯ ಕ್ಲಿನಿಕ್, ಗ್ರಂಥಾಲಯ,ಸಾಹಿತ್ಯ ಕುಟೀರ, ಭಜನಾ ಸಂಕೀರ್ತನಾ ಕುಟೀರ,ನಮ್ಮ ಮನೆ – ವಿಶ್ರಾಂತಿ ಗ್ರಹ (ರೆಸ್ಟ್ ಹೌಸ್) ವನ್ನು ನಿರ್ಮಿಸಲು ಕಾರ್ಯ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.
ಶಿವರಾಮ ಕಾಸರಗೋಡು, ಅಧ್ಯಕ್ಷರು,ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.),(ಕಾಸರಗೋಡು ಗೋ -ಕುಟೀರ )ಕನ್ನಡ ಗ್ರಾಮ,ಕನ್ನಡ ಗ್ರಾಮ ರಸ್ತೆ, ಕಾಸರಗೋಡು-671121 ಮೊಬೈಲ್ :-9448572016
ಇಮೇಲ್ : shivaramakasaragod@gmail.com ಗೂಗಲ್ ಪೇ ಸಂಖ್ಯೆ :9448572016 ಇಲ್ಲಿಗೆ ತಮ್ಮ ದೇಣಿಗೆಯನ್ನು ಪಾವತಿಸಿ ಪ್ರೋತ್ಸಾಹಿಸಬಹುದು.
ವಿ. ಸೂ :- ಈ ಪ್ರಕಟಣೆಯನ್ನು ತಮ್ಮ ವಾಟ್ಸಾ ಪ್ ಗ್ರೂಪ್ ಗಳು ಫೇಸ್ ಬುಕ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ (ಫಾರ್ವಡ್) ಮೂಲಕ ನಾಡಿನಾದ್ಯಂತ ಸರ್ವ ಸಮಾಜದ ಬಂಧುಗಳಿಗೆ ತಲುಪಿಸಿ, ನಮ್ಮೊಂದಿಗೆ ಸಹಕರಿಸಿರಿ.

