ಉಡುಪಿ : ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬರು ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪುತ್ತೂರು ನೆಲ್ಯಾಡಿ ನಿವಾಸಿ ಜಿನ್ಸನ್ ಪಿ.ಎಮ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣೆಯ ಠಾಣಾಧಿಕಾರಿ ಭರತೇಶ್, ಪಿ ಎಸ್ ಐ ನಾರಾಯಣ, ಎ.ಎಸ್.ಐ ವಿಜಯ್ ಘಟನಾ ಸ್ಥಳದಲ್ಲಿದ್ದು, ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

