ಮಂಗಳೂರು : ಕೌಟುಂಬಿಕ ಕಲಹದ ವಿಚಾರಕ್ಕೆ ದೂರು ನೀಡಲು ಬಂದ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಮೂಡಬಿದಿರೆ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಅವರ ವಿರುದ್ಧ ಮಹಿಳಾ ಆಯೋಗವು ಸ್ವಯಂಪ್ರೇರಿತ ಪ್ರಕರಣ (ಸುಮಟೋ ಕೇಸ್) ದಾಖಲಿಸಿಕೊಂಡಿದ್ದು ವರದಿ ಕೊಡುವಂತೆ ಮಂಗಳೂರು ಪೊಲೀಸ್ ಕಮೀಷನರ್ ಗೆ ಪತ್ರ ಬರೆದಿದೆ. ಇದರ ಬೆನ್ನಲ್ಲೇ ಇನ್ಸ್ಪೆಕ್ಟರ್ ಸಂದೇಶ ಅವರನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಈ ಪ್ರಕರಣ ಸಂಬಂಧ ತನಿಖೆ ನಡೆಸಿ 5 ದಿನದೊಳಗೆ ವರದಿ ನೀಡುವಂತೆ ಮಂಗಳೂರ ನಗರ ಪೊಲೀಸ್ ಕಮೀಷನರ್ ಗೆ ಪತ್ರದಲ್ಲಿ ತಿಳಿಸಿದೆ.
ಮಹಿಳೆ ಕಿರುಕುಳ ಆರೋಪ ಸಂಬಂಧ ಕೆಲ ಆಡಿಯೋ ವಿಡಿಯೋಗಳ ಬಯಲಿಗೆ ಬರುತ್ತಿದ್ದಂತೆಯೇ ಇನ್ಸ್ಪೆಕ್ಟರ್ ವಿರುದ್ಧದ ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಎಸಿಪಿ ಶ್ರೀಕಾಂತ್ಗೆ ಜವಾಬ್ದಾರಿ ನೀಡಲಾಗಿದೆ.

