ಸುರತ್ಕಲ್ : ಸುರತ್ಕಲ್ ಗೋವಿಂದ ದಾಸ ಕಾಲೇಜು ಹಾಗೂ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆಯ ಆಶ್ರಯದಲ್ಲಿ ಮಾರ್ಚ್ 21 ರ ಶನಿವಾರದಂದು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಯಕ್ಷ ಕೇಸರಿ ಅಗರಿ ರಘುರಾಮ ಭಾಗವತ ವೇದಿಕೆಯಲ್ಲಿ ಯಕ್ಷಯಾನ ಅಗರಿ ಸಂಸ್ಕರಣೆ ಹಾಗೂ ಪ್ರಶಸ್ತಿ ಪ್ರದಾನ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ ನಡೆಯಲಿದೆ ಎಂದು ಅಗರಿ ರಾಘವೇಂದ್ರ ರಾವ್ ಹೇಳಿದರು.
ಸುರತ್ಕಲ್ನ ಶುಭಗಿರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಚ್ ೯ 21ರ ಶನಿವಾರ ಬೆಳಿಗ್ಗೆ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಯಕ್ಷ ಕೇಸರಿ ಅಗರಿ ರಘುರಾಮ ಭಾಗವತ ವೇದಿಕೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಉದ್ಯಮಿ ರಘುನಾದ ಶೆಟ್ಟಿ, ಕೃಷ್ಣಾಪುರ ನೆರವೇರಿಸಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ. ಹರೀಶ ಆಚಾರ್ಯ ಪಿ. ವಹಿಸಲಿದ್ದಾರೆ.

ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀಮತಿ ಶಕುಂತಳ ರಮಾನಂದ ಭಟ್ ದೀಪ ಪ್ರಜ್ವಲನೆಗೈಯಲಿದ್ದು ಮುಖ್ಯ ಅತಿಥಿಗಳಾಗಿ ಹಿಂದೂ ವಿದ್ಯಾದಾಯಿನೀ ಸಂಘ (ರಿ.), ಸುರತ್ಕಲ್ನ ಕಾರ್ಯದರ್ಶಿ ಶ್ರೀರಂಗ ಹೆಚ್, ಅಗರಿ ಎಂಟರ್ ಪೈಸಸ್ನ ಮಾಲಕ ಅಗರಿ ರಾಘವೇಂದ್ರ ರಾವ್ ಪಾಲ್ಗೊಳ್ಳಲಿದ್ದಾರೆ.
ಸಂಜೆ 4:30ಕ್ಕೆ ಜರಗಲಿರುವ ಯಕ್ಷಯಾನ-2026 ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕ ವೇದಮೂರ್ತಿ ಕಮಲಾದೇವಿ ಪ್ರಸಾದ ಆಸ್ರಣ್ಣರು ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ಉದ್ಯಮಿ ಶ್ರೀ ಪತಿ ಭಟ್, ಮೂಡುಬಿದಿರೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿಂದು ವಿದ್ಯಾದಾಯಿನೀ ಸಂಘ ಸುರತ್ಕಲ್ನ ಅಧ್ಯಕ್ಷ ಜಯಚಂದ್ರ ಹತ್ವಾರ್ ಎಸ್. ಶಾಸಕ ಡಾ. ವೈ. ಭರತ್ ಶೆಟ್ಟಿ, ಕಿನ್ನಿಗೋಳಿಯ ಯುಗಪುರುಷದ ಕೆ ಭುವನಾಭಿರಾಮ ಉಡುಪ, ಶ್ರೀನಿವಾಸ ಕಾಲೇಜಿನ ಪ್ರೊಫೆಸರ್ ಶ್ರೀನಾಥ್ ರಾವ್ ಭಾಗವಹಿಸಲಿದ್ದು ಅಗರಿ ಸಂಸ್ಕರಣ ಭಾಷಣವನ್ನು ಕೃಷ್ಣ ಪ್ರಕಾಶ ಉಳಿತ್ತಾಯ ನೆರವೇರಿಸಲಿದ್ದು, ಅಭಿನಂದನ ಭಾಷಣ ಡಾ.ವಾದಿರಾಜ ಕಲ್ಲೂರಾಯ ಮಾಡಲಿದ್ದಾರೆ.
ಅಗರಿ ರಘುರಾಮ ಭಾಗವತ ಪ್ರಶಸ್ತಿಯನ್ನು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಮತ್ತು ಅಗರಿ ಪ್ರಶಸ್ತಿಯನ್ನು ಕಟೀಲು ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿಯವರಿಗೆ ರೂ 35,000 ನಗದಿನೊಂದಿಗೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಬೆಳಿಗ್ಗೆ 9 ರಿಂದ ಸಂಜೆ 3.30 ರ ವರೆಗೆ ನಡೆಯಲಿರುವ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಸ್ವಸ್ತಿಕ ನ್ಯಾಶನಲ್ ಬಿಸಿನೆಸ್ ಸ್ಕೂಲ್, ಮಂಗಳೂರು ತಂಡದಿಂದ ಬನರಕಾಸುರ ಮೋಕ್ಷ ,10.15ರಿಂದ 11.15ರವರೆಗೆ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ ಕಲಾವಿದರಿಂದ ಭೀಷ್ಮ ಪ್ರತಿಜ್ಞೆ 11.30ರಿಂದ 12.30 ರವರೆಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜು ತಂಡದಿಂದ ರತ್ನಾವತಿ ಕಲ್ಯಾಣ ಅಪರಾಹ್ನ 1 ರಿಂದ 2 ರವರೆಗೆ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ರವರಿಂದ ಬಬ್ರುವಾಹನ ಕಾಳಗ 2.15ರಿಂದ 3.15ರವರೆಗೆ ಎಸ್.ಡಿ.ಎಮ್ ಕಾಲೇಜು, ಉಜಿರೆ ಇವರಿಂದ ತರಣಿಸೇನ ಕಾಳಗ 3:30ರಿಂದ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಯಕ್ಷಗಾನ ಮತ್ತು ಲಲಿತ ಕಲಾ ಅಧ್ಯಯನ ಕೇಂದ್ರದವರಿಂದ ಸುಧನ್ನ ಮೋಕ್ಷ ಯಕ್ಷಗಾನ ಪ್ರದರ್ಶನ ಗೊಳ್ಳಲಿದೆ ಎಂದು ಪುಂಡಲೀಕ ಹೊಸಬೆಟ್ಟು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಯಕ್ಷ ಧ್ರುವ ಪಟ್ಟ ಫೌಂಡೇಶನ್ ಸುರತ್ಕಲ್ ಘಟಕದ ಕಾರ್ಯದರ್ಶಿ ಗಂಗಾಧರ ಪೂಜಾರಿ ಚೇಳ್ಯರು, ಪೂರ್ಣೀಮಾ ಯತೀಶ್ ರೈ, ಹರೀಶ್ ಆಚಾರ್ಯ, ಪ್ರಕಾಶ್ ಕುಳಾಯಿ, ರಜನ್ ಕುಮಾರ್ ಕಾವೂರು ಉಪಸ್ಥಿತರಿದ್ದರು ಇದೇ ವೇಳೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

