ದಾವಣಗೆರೆ: ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ಸಮಿತಿ ಸಂಚಾಲಕರಾದ ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿ ಉಸ್ತುವಾರಿ ಸಮಿತಿಯ ಪೂರ್ವಭಾವಿ ಸಭೆ ನಡೆಸಿ ಅಭ್ಯರ್ಥಿಯ ಬಗ್ಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಮುಂದಿನ ಚುನಾವಣಾ ರೂಪುರೇಷೆ ಕುರಿತು ಚರ್ಚಿಸಲಾಯಿತು.ಈ ಸಭೆಯಲ್ಲಿ ದಾವಣಗೆರೆ ಜಿಲ್ಲಾ ಉಸ್ತುವಾರಿ ಮಾಜಿ ಮಂತ್ರಿಗಳಾದ ಎಚ್ಎಮ್ ರೇವಣ್ಣ, ಮಾಜಿ ಸಚಿವರಾದ ಆಂಜನೇಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಬಾಲರಾಜ್ ನಾಯಕ್ ಹಾಗೂ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀರವರು ಉಪಸ್ಥಿತರಿದ್ದರು.

