ಉಡುಪಿ: ಟಿಪ್ಪರ್ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಗುರುವಾರ ಕಾರ್ಕಳದ ಪಳ್ಳಿ ಅಡಪಾಡಿ ಹತ್ತಿರ ನಡೆದಿದೆ.
ಮೃತಪಟ್ಟ ಯುವಕನನ್ನು ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ.
ಗಣೇಶ್ ನಾಯಕ್ ಅವರು ತನ್ನ ಬೈಕ್ನಲ್ಲಿ ಪೇಟೆ ಕಡೆಗೆ ಹೋಗುತ್ತಿರುವಾಗ ಟಿಪ್ಪರ್ ಲಾರಿಯೊಂದು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಗಣೇಶ ನಾಯಕ್ ಇವರು ಮೋಟಾರ್ ಸೈಕಲ್ ಸಮೇತ ರಸ್ತೆಯಲ್ಲಿ ಬಿದ್ದರು. ಈ ಸಂದರ್ಭದಲ್ಲಿ ಟಿಪ್ಪರ್ ಲಾರಿಯ ಹಿಂಬದಿಯ ಟಯರ್ ಹೆಲ್ಮೆಟ್ ಹಾಕಿದ ಗಣೇಶ ನಾಯಕ್ ಅವರ ತಲೆಯ ಮೇಲೆ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಗಣೇಶ ನಾಯಕ್ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

