ಬೆಳ್ತಂಗಡಿ : ಮಹಿಳೆಯರ ಮೆಲೆ ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಅಮಾನತುಗೊಂಡಿರುವ ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಇದೀಗ ವೇಣೂರು ಪೋಲಿಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲಾ ಶಿಕ್ಷಕಿಯೊಬ್ಬರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ. 2018-2023ರ ಅವಧಿಯಲ್ಲಿ ಅತ್ಯಾಚಾರ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆ ಮೂಲಕ ಈ ಹಿಂದೆ ವೇಣೂರು ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್ ಪಿ.ಜಿ ಯವರಿಗೆ ಬಿಗ್ ಶಾಕ್ ಎದುರಾಗಿದೆ.
2018 ರಿಂದ 2023ರವರೆಗೆ ಶಿಕ್ಷಕಿ ಮನೆಗೆ ಹೋಗಿ ಬೆದರಿಸಿ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. 2020ರಲ್ಲಿ ಸಂದೇಶ್ ಬೆಳ್ತಂಗಡಿ ಸರ್ಕಲ್ ವ್ಯಾಪ್ತಿಯಲ್ಲಿರುವ ವೇಣೂರು ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದರು. ಹೀಗಾಗಿ ವೇಣೂರು ಠಾಣಾ ವ್ಯಾಪ್ತಿಯಲ್ಲೇ ಅತ್ಯಾಚಾರ ಆರೋಪದಡಿ ಸೆಕ್ಷನ್ 376(2)(a)(1), 376(2)(n), 384, 506ರಡಿ ಕೇಸ್ ದಾಖಲಾಗಿದೆ.

