ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಮಾರ್ಚ್ 26 ರಿಂದ 28ರ ತನಕ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ.ಶ್ರೀನಾಥ್ ತಿಳಿಸಿದರು .
ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾಹಿತ್ಯತೋತ್ಸವದ ಭಾಗವಾಗಿ ಅಮ್ಮೆಂಬಳ ಬಾಳಪ್ಪ ದ್ವಾರದ ಉದ್ಘಾಟನೆ , ತಂತ್ರಜ್ಞಾನ-ಸಾಹಿತ್ಯ-ಸಹಬಾಳ್ವೆ ಎಂಬ ಆಶಯದಲ್ಲಿ ರಾಣಿ ಅಬ್ಬಕ್ಕ ವೇದಿಕೆ, ಪಂಜೆ ಮಂಗೇಶರಾಯ ಸಭಾಂಗಣದಲ್ಲಿ ನಡೆಯಲಿರುವ ತ್ರಿದಿನ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿ ವಹಿಸಲಿದ್ದಾರೆ ಎಂದರು

ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ಶಾಸಕ ರಾಜೇಶ್ ನಾಯ್ಕ್ , ಮಾಜಿ ಸಚಿವ ರಮಾನಾಥ ರೈ, ಅಧ್ಯಕ್ಷರಾಗಿ ಬಿ.ರಘುನಾಥ ಸೋಮಯಾಜಿ ಎರಕಳ, ಕಾರ್ಯಾಧ್ಯಕ್ಷರಾಗಿ ಪಿಯೂಸ್ ಎಲ್. ರೋಡ್ರಿಗಸ್ ಸಹಿತ ಮುಂತಾದ ಸಮಿತಿಯ ಸದಸ್ಯರು ಸಾಹಿತ್ಯ ಸಮ್ಮೇಳನದಲ್ಲಿ ಉಪಸ್ಥಿತರಿರುವವರು ಎಂದರು .
ಸಮ್ಮೇಳನದಲ್ಲಿ 30ಕ್ಕೂ ಅಧಿಕ ಪುಸ್ತಕ ಮಳಿಗೆಗಳು, ಕರಾವಳಿಯ ಆಕರ್ಷಕ ವಸ್ತುಸಂಗ್ರಹ ಪ್ರದರ್ಶನ, ಗುಡಿಕೈಗಾರಿಕೆ, ಕರಕುಶಲ, ಕೈಮಗ್ಗ, ಆಹಾರ ಸಹಿತ ವಿವಿಧ ಮಳಿಗೆಗಳು, ಪಟ್ಟಾಂಗಕಟ್ಟೆಯಲ್ಲಿ ಅಜ್ಜಿಕಥೆ, ಉತ್ತರ ಹೇಳಿ ಪುಸ್ತಕ ಗೆಲ್ಲಿ, ಗ್ರಾಮೀಣ ಪ್ರತಿಭೆಗಳ ನೃತ್ಯ ಇರಲಿದೆ ಎಂದರು, 3 ದಿನಗಳಲ್ಲಿ ಕೃತಿಗಳ ಲೋಕಾರ್ಪಣೆ ,ವಿಶೇಷ ಉಪನ್ಯಾಸ ,ಗೋಷ್ಠಿಗಳು ,ವಾಚನ ಗಾಯನ ಕುಂಚ ಇವುಗಳನ್ನು ಒಳಗೊಂಡ ಸಾಹಿತ್ಯ ಕಾರ್ಯಕ್ರಮ ನಡೆಯಲಿದೆ ಎಂದರು .
ಸಾಹಿತ್ಯ ಸಮ್ಮೇಳನದ ಕೊನೆಯ ದಿನ ಸನ್ಮಾನ ಮತ್ತು ಸಮಾರೋಪ ಕಾರ್ಯಕ್ರಮ ನಡೆಯಲಿದ್ದು ಸನ್ಮಾನ ಮತ್ತು ಸಮಾರೋಪ 4ರಿಂದ 5.30ವರೆಗೆ ನಡೆಯಲಿದೆ. ಸಮಾರೋಪ ಭಾಷಣವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಮಾಡುವರು. ಸನ್ಮಾನ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಮಾಜಿ ಸಚಿವ ಬಿ.ರಮಾನಾಥ ರೈ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಬಿ. ರಘುನಾಥ ಸೋಮಯಾಜಿ, ಕಾರ್ಯಾಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ ನೆರವೇರಿಸುವರು ಈ ಸಂದರ್ಭದಲ್ಲಿ ವಿವಿಧ ಗಣ್ಯರು ಉಪಸ್ಥಿತರಿರುವರು .
ಈ ಬಾರಿ ಮಹಾಸಾಧಕರು, ಮಹಾದಾನಿಗಳು, ಸಮಾಜಚಿಂತಕರು, ಸಮಾಜಸೇವೆಯಲ್ಲಿ ತೊಡಗಿಸಿಕೊಂಡ ಮಹಾವ್ಯಕ್ತಿಗಳ ನೆಲೆಯಲ್ಲಿ ಡಾ. ಪಿ.ದಯಾನಂದ ಪೈ, ನಾಡೋಜ ಜಿ.ಶಂಕರ್, ಡಾ. ಕೆ.ಪ್ರಕಾಶ್ ಶೆಟ್ಟಿ ಬಂಜಾರ, ಕೆ.ಡಿ. ಶೆಟ್ಟಿ, ರವಿಶಂಕರ ಶೆಟ್ಟಿ ಬಡಾಜೆಗುತ್ತು, ಪಟ್ಲ ಸತೀಶ ಶೆಟ್ಟಿ, ಉದಯ ಸುವರ್ಣ, ವಿನೋದ್ ಶೆಣೈ, ಕಿಶೋರ್ ಆಳ್ವ ಅವರನ್ನು ಸನ್ಮಾನಿಸಲಾಗುವುದು ಎಂದರು .
ಜಗನ್ನಾಥ ಚೌಟ ಬದಿಗುಡ್ಡೆ, ಎಸ್.ಆರ್. ಸತೀಶ್ಚಂದ್ರ, ಭುವನೇಶ್ ಪಚ್ಚಿನಡ್ಕ, ಜಗನ್ನಾಥ ಬಂಗೇರ ನಿರ್ಮಲ್ ಅವರಿಗೆ ಸಾಧಕಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು .
ಪದ್ಮನಾಭ ಭಟ್ ಎಕ್ಕಾರು, ಕೆ.ಟಿ.ವಿಶ್ವನಾಥ, ಡಾ. ಈ.ಕೆ.ಎ.ಸಿದ್ದೀಕ್ ಅಡ್ಡೂರು , ಪುರಂದರ ಭಟ್, ರವೀಶ್ ಪಡುಮಲೆ, ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ, ಸದಾನಂದ ನಾರಾವಿ, ಶಾಂತಾರಾಮ ಕುಂದರ್, ಕೆ.ರಾಜಾರಾಮ ಶರ್ಮ ಬೆಳಾಲು, ಕೇಶವ ಎ. ಕೊಯ್ದ, ಮುರಳೀಧರ ವೈ.ಕೆ, ಅಬ್ದುಲ್ ಲತೀಫ್ ಗುರುಪುರ, ಗೋಪಾಲ ಅಂಚನ್, ದೇವಿಪ್ರಸಾದ್ ಬೆಳ್ತಂಗಡಿ, ಲೂವಿಝಾ ಕುಟಿನ್ಯೂ, ಶಂಕರ ಐತಾಳ ಅವರಿಗೆ ಕನ್ನಡಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.
ಗಡಿನಾಡು ಸೇವೆಗಾಗಿ ಡಾ. ಎಸ್.ಆರ್.ನರಹರಿ, ಸಂಸ್ಥೆಯಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿ ಅವರನ್ನು ಗೌರವಿಸಲಾಗುವುದು ಎಂದರು.
ಸಂಜೆ 5.30ರಿಂದ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ನಿರ್ದೇಶಕ ಜೀವನ್ ರಾಮ್ ಸುಳ್ಯ ತಂಡದಿಂದ ಕನ್ನಡ ಗಾನ ಗುಚ್ಛ, 6.30ರಿಂದ ಶ್ರದ್ಧಾ ಕಲ್ಲಡ್ಕ ಬಳಗದ ನೃತ್ಯವೈಭವ ಇರಲಿದೆ. 7.30ರಿಂದ 9ವರೆಗೆ ಶರಸೇತುಬಂಧನ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಚ್ ವಿನಯ್ ಆಚಾರ್ಯ ,ಸಂಚಾಲಕರಾದ ವಿಶ್ವನಾಥ ಬಂಟ್ವಾಳ, ಕೋಶಾಧಿಕಾರಿಯಾಗಿ ಸುಭಾಶ್ಚಂದ್ರ ಜೈನ್ ,ಪ್ರಧಾನ ಕಾರ್ಯದರ್ಶಿಗಳಾದ ಅಬುಬಕ್ಕರ್, ಕಾರ್ಯದರ್ಶಿಗಳಾದ ದೇವಪ್ಪ ಉಪಸ್ಥಿತರಿದ್ದರು.

